ರೈತರ ಆದಾಯ ಹೆಚ್ಚಿಸಲು ಸರ್ಕಾರದ ಹೊಸ ಮಾಸ್ಟರ್ ಪ್ಲ್ಯಾನ್

ಬೆಂಗಳೂರು: ರೈತರ ಆದಾಯ ಹೆಚ್ಚಿಸುವುದರ ಜತೆಗೆ ಕೃಷಿಯನ್ನು ಲಾಭದಾಯಕ ಉದ್ಯಮವನ್ನಾಗಿಸುವ ಉದ್ದೇಶದಿಂದ ಮುಂದಿನ ಮೂರು ವರ್ಷಗಳಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಅನುಷ್ಠಾನಗೊಳಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಸಾಮಾನ್ಯವಾಗಿ ಕೃಷಿಯಲ್ಲಿ ಇಳುವರಿ ಹೆಚ್ಚಳಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿತ್ತು. ಆದರೆ, ಈ ಯೋಜನೆಯಡಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಸಂಸ್ಕರಣೆಗೆ ಒತ್ತು ನೀಡಲು ಸರ್ಕಾರ ಮುಂದಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ಉಪ ಉತ್ಪನ್ನಗಳ … Continue reading ರೈತರ ಆದಾಯ ಹೆಚ್ಚಿಸಲು ಸರ್ಕಾರದ ಹೊಸ ಮಾಸ್ಟರ್ ಪ್ಲ್ಯಾನ್