ನವದೆಹಲಿ: ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ (ಎನ್‌ಐಸಿಡಿಪಿ) ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.
ರಾಜ್ಯದ ಕೈಗಾರಿಕೆ ಹಾಗೂ ಸಾಗಣೆ ಕ್ಷೇತ್ರಗಳಿಗೆ ಪರಿವರ್ತನಾತ್ಮಕ ಕಾಯಕಲ್ಪ ನೀಡುವ ಯೋಜನೆಗೆ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಸ್ಪಂದಿಸಿದ್ದು; ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಒಂಬತ್ತು ಕೈಗಾರಿಕಾ ಪಾರ್ಕ್‌ಗಳನ್ನು ಸ್ಥಾಪಿಸುವ ಬಗ್ಗೆ ಒಲವು ತೋರಿ, ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.
ಪಿಯೂಷ್ ಗೋಯಲ್ ಅವರನ್ನು ನವೆಂಬರ್ 13ರಂದು ಭೇಟಿಯಾಗಿದ್ದ ಸಚಿವ ಕುಮಾರಸ್ವಾಮಿ, ರಾಜ್ಯದ ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಗಳೂರು, ಹುಬ್ಬಳ್ಳಿ – ಧಾರವಾಡ, ರಾಯಚೂರು ಮತ್ತು ಬೀದರ್ ಜಿಲ್ಲೆಗಳನ್ನು ಒಳಗೊಂಡ ಸುವಿಶಾಲವಾದ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನ ಮಾಡಬೇಕೆಂದು ಕೋರಿ ಮನವಿಯನ್ನು ಸಲ್ಲಿಸಿ ಮಾತುಕತೆ ನಡೆಸಿದ್ದರು.
ಕುಮಾರಸ್ವಾಮಿ ಅವರ ಪ್ರಸ್ತಾವನೆಯನ್ನು ರಾಜ್ಯದ ಅಭಿವೃದ್ಧಿಗೆ ಪರಿವರ್ತನಾತ್ಮಕ ಪರಿಕಲ್ಪನೆ ಎಂದು ಶ್ಲಾಘಿಸಿದ್ದ ಗೋಯೆಲ್, ಈ ಬಗ್ಗೆ ಉತ್ತರ ಬರೆದಿದ್ದಾರೆ. ರಾಜ್ಯದ ಪ್ರಾದೇಶಿಕ ಸಮತೋಲಿತ ಕೈಗಾರಿಕಾ ಅಭಿವೃದ್ಧಿಗೆ ಇದು ಪೂರಕವಾಗಿದೆ. ಇಂಥ ಆಕಾಂಕ್ಷೆಗಳನ್ನು ಈಡೇರಿಸುವ ಕೇಂದ್ರದ ರಚನಾತ್ಮಕ ಕೇಂದ್ರ ನೀತಿಯನ್ನು ಕಾರ್ಯರೂಪಕ್ಕೆ ತರುವಲ್ಲಿ ಈ ಕ್ರಮವು ಒಂದು ಪ್ರಮುಖ ಆರಂಭಿಕ ಹೆಜ್ಜೆಯಾಗಿದೆ ಎಂದು ಸಚಿವ ಗೋಯೆಲ್ ಅವರು ತಿಳಿಸಿದ್ದಾರೆ.
ಪ್ರಸ್ತಾವಿತ ಕೈಗಾರಿಕಾ ಪಾರ್ಕುಗಳು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸುವ, ಪ್ರಾದೇಶಿಕ ಪೂರೈಕೆ ಸರಪಳಿಯ ಸಂಪರ್ಕಗಳನ್ನು ಮತ್ತಷ್ಟು ಬಲಪಡಿಸುವ ಹಾಗೂ ಹುಬ್ಬಳ್ಳಿ-ಧಾರವಾಡ ಮತ್ತು ಮಂಗಳೂರಿನಲ್ಲಿ ಸಾಗಣೆ ಮತ್ತು ಉತ್ಪಾದನೆಯಿಂದ ಮೊದಲುಗೊಂಡು ರಾಯಚೂರಿನಲ್ಲಿ ಕೃಷಿ ಸಂಸ್ಕರಣೆ, ಮೈಸೂರು ಮತ್ತು ಕೋಲಾರದಲ್ಲಿ ಮೌಲ್ಯವರ್ಧಿತ ವಲಯಗಳ ವಿಸ್ತರಣೆವರೆಗೆ ವಿಶೇಷ ಕೈಗಾರಿಕಾ ಸಮೂಹಗಳನ್ನು ಉತ್ತೇಜಿಸುತ್ತವೆ.
ಯೋಜನೆ ಅನುಷ್ಠಾನಕ್ಕೆ ಬಂದರೆ ಕರ್ನಾಟಕದಲ್ಲಿ ಸರಕು, ಕೈಗಾರಿಕೆ ಉತ್ಪನ್ನಗಳ ಸಾಗಣೆ ಸುಲಭವಾಗಿ ಕೈಗಾರಿಕಾಭಿವೃದ್ಧಿ ವೇಗಗತಿಯಲ್ಲಿ ಸಾಗುತ್ತದೆ. ಉದ್ದೇಶಿತ ಜಿಲ್ಲೆಗಳಲ್ಲಿ ಯೋಜನೆ ಅನುಷ್ಠಾನಕ್ಕೆ ಬಂದರೆ ಇಡೀ ರಾಜ್ಯಕ್ಕೆ ನಾಲ್ಕು ದಿಕ್ಕುಗಳ್ಳಿಯೂ ಅನುಕೂಲ ಆಗುತ್ತದೆ.






















Howdy would you mind letting me know which hosting company you’re
using? I’ve loaded your blog in 3 different browsers and I must say this blog loads a lot faster then most.
Can you suggest a good internet hosting provider at a reasonable price?
Thank you, I appreciate it!