Home ಸುದ್ದಿ ರಾಜ್ಯ Government Jobs: ವಿವಿಧ ಇಲಾಖೆಗಳ ಹೊಸ ನೇಮಕಾತಿ ಅಧಿಸೂಚನೆ

Government Jobs: ವಿವಿಧ ಇಲಾಖೆಗಳ ಹೊಸ ನೇಮಕಾತಿ ಅಧಿಸೂಚನೆ

0

Government Jobs. ಕರ್ನಾಟಕದಲ್ಲಿ ಸರ್ಕಾರಿ ಕೆಲಸ ಪಡೆಯಬೇಕು ಎಂದು ಕಾಯುತ್ತಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿ ಇದೆ. ಪರಿಶಿಷ್ಟ ಜಾತಿ ಒಳಮೀಸಲಾತಿ ಅಳವಡಿಸಿಕೊಂಡು ಕಾಲಬದ್ಧವಾಗಿ ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಲು ಸೂಚನೆ ನೀಡಲಾಗಿದೆ.

ಸೆ.4ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ದಿನಾಂಕ 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ ಮಂಡಳಿ/ ನಿಗಮ/ ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಹೊರಡಿಸಿದ ಅಧಿಸೂಚನೆಗಳನ್ನು ರದ್ದುಗೊಳಿಸಿ ಸರಕಾರ ಈ ಹಿಂದೆ ಆದೇಶವನ್ನು ಹೊರಡಿಸಿತ್ತು.

ಪರಿಶಿಷ್ಟ ಜಾತಿ ಒಳಮೀಸಲಾತಿಯನ್ನು ಅಳವಡಿಸಿಕೊಂಡು ಕಾಲಬದ್ಧವಾಗಿ (Time Bound) ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸುವಂತೆ ಈಗ ಸೂಚಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ.

ದಿನಾಂಕ 28.10.2024ರ ಹಿಂದೆ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ದಿನಾಂಕ 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ ಮಂಡಳಿ/ ನಿಗಮ/ ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಯಾವುದಾದರೂ ತಿದ್ದುಪಡಿ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಅಂತಹ ಎಲ್ಲಾ ಅಂತಹ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನೂ ಸಹ ರದ್ದುಗೊಳಿಸಿ, ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕು ಎಂದು ಸೂಚಿಸಲಾಗಿದೆ.

ಹಾಗೂ ಕಾಲಬದ್ದವಾಗಿ (Time Bound) ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಆಯ್ಕೆ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿಗಳು ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಪ್ರಮುಖ ಸೂಚನೆಗಳು

  • ರಾಜ್ಯ ಸಿವಿಲ್ ಸೇವೆಗಳ ಹುದ್ದೆಗಳಿಗೆ ಒಳಮೀಸಲಾತಿ ಹಿನ್ನೆಲೆಯಲ್ಲಿ ತಡೆಹಿಡಿಯಲಾದ ನೇರ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಕ್ರಮವಹಿಸುವುದು. ಎಲ್ಲಾ ಇಲಾಖೆಗಳು ಮತ್ತು ಅವುಗಳ ಅಧೀನದ ಎಲ್ಲಾ ನಿಗಮ/ ಮಂಡಳಿ/ ಸಂಸ್ಥೆಗಳಲ್ಲಿ ಮುಂಬಡ್ತಿ ಪ್ರಕ್ರಿಯೆಯನ್ನೂ ಸಹ ಮುಂದುವರೆಸಬಹುದಾಗಿದೆ.
  • ಉದ್ಯೋಗಳ ನೇಮಕಾತಿಯಲ್ಲಿ ಹಾಜರಾಗುವ ಎಲ್ಲಾ ಅಭ್ಯರ್ಥಿಗಳಿಗೆ ಆಯಾ ನೇಮಕಾತಿಗಳಿಗೆ ನಿಗದಿಪಡಿಸಿರುವ ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ನೀಡಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಪ್ರತ್ಯೇಕವಾಗಿ ಆದೇಶ ಹೊರಡಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಅಗತ್ಯ ಕ್ರಮವಹಿಸುವುದು.
  • ಹೊಸ ದತ್ತಾಂಶ ಅಥವಾ ಮಾಹಿತಿ ಬಂದಾಗ ಅಗತ್ಯ ಮಾರ್ಪಾಡುಗಳನ್ನು ಮಾಡಲು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗಕ್ಕೆ ಅಧಿಕಾರ ನೀಡುವ ಬಗ್ಗೆ, ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಅಧಿನಿಯಮ, 2002ಕ್ಕೆ ಸೂಕ್ತ ತಿದ್ದುಪಡಿ ಮಾಡಲಾಗುವುದು.
  • ಪರಿಶಿಷ್ಟ ಜಾತಿಗಳಲ್ಲಿನ ಚಲನಶೀಲತೆಯನ್ನು ಹಾಗೂ ಲಭ್ಯವಾಗುವ ದತ್ತಾಂಶಗಳನ್ನು ಪರಿಶೀಲಿಸಿಕೊಂಡು, ಕಾಲಕಾಲಕ್ಕೆ ಈ ಜಾತಿಗಳನ್ನು ಅಧ್ಯಯನ ಮಾಡಿ, ವರದಿ ನೀಡಲು ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗವನ್ನು ರಚಿಸಲಾಗುವುದು.
  • ಒಳ ಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ನಿರ್ಧರಿಸಲಾಗಿದ್ದು, ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳ ಕುರಿತು ಪರಿಶೀಲಿಸಿ ತುರ್ತಾಗಿ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಬಗ್ಗೆ ಸದರಿ ವಿಷಯಕ್ಕೆ ಸಂಬಂಧಿಸಿದ ಸಚಿವ ಸಂಪುಟ ಉಪಸಮಿತಿಯು ಕ್ರಮವಹಿಸುವುದು.

NO COMMENTS

LEAVE A REPLY

Please enter your comment!
Please enter your name here

Exit mobile version