ಬೆಳೆಗಾರರ ಸಂಕಷ್ಟ: ಪಿಎಂಗೆ ಸಿಎಂ ಪತ್ರ

0
37

ಬೆಂಗಳೂರು: ಮೆಕ್ಕೆಜೋಳ ಮತ್ತು ಹೆಸರುಕಾಳು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಹಲವು ವಿಷಯಗಳಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಒತ್ತಾಯಿಸಿದ್ದಾರೆ.

  1. NAFED, FCI ಮತ್ತು NCCF ಗೆ ತಕ್ಷಣ ಎಂಎಸ್‌ಪಿ ದರದಲ್ಲಿ ಮೆಕ್ಕೆಜೋಳ ಮತ್ತು ಹೆಸರುಕಾಳು ಖರೀದಿ ಆರಂಭಿಸಲು ನಿರ್ದೇಶನ ನೀಡಬೇಕು.
  2. ಎಥೆನಾಲ್ ಪೂರೈಕೆಯ ಇಡಿ ವ್ಯವಸ್ಥೆಯಲ್ಲಿ ಕರ್ನಾಟಕದ ರೈತರ ನ್ಯಾಯಯುತ ಭಾಗವಹಿಸುವಿಕೆಯನ್ನು ಖಾತ್ರಿಪಡಿಸಬೇಕು.
  3. ಕರ್ನಾಟಕಕ್ಕೆ ಎಥೆನಾಲ್‌ ಹಂಚಿಕೆ ಪ್ರಮಾಣವನ್ನು ಹೆಚ್ಚಿಸಬೇಕು.
  4. ದೇಶಿಯ ಮೆಕ್ಕೆಜೋಳ ಉತ್ಪಾದಕರಿಗೆ ಬೆಲೆ ಕುಸಿತದ ಹೊಡೆತ ನೀಡಿರುವ ವಿದೇಶಿ ಮೆಕ್ಕೆಜೋಳ ಆಮದನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು.
  5. ಹೆಸರುಕಾಳು ಖರೀದಿಗೆ ಗುಣಮಟ್ಟದ ನಿಯಮಗಳಲ್ಲಿ ಸಡಿಲಿಕೆ ಮಾಡಬೇಕು, ಇದರಿಂದ ರೈತರು ತಮ್ಮ ನಿಯಂತ್ರಣದಲ್ಲಿ ಇಲ್ಲದ ಹವಾಮಾನ ವೈಪರಿತ್ಯಗಳು ಉಂಟುಮಾಡುವ ನಷ್ಟವನ್ನು ತಪ್ಪಿಸಿಕೊಳ್ಳಬಹುದಾಗಿದೆ.

ಈ ಪ್ರಮುಖ 5 ಅಂಶಗಳ ಕುರಿತು ಕೇಂದ್ರ ಸರ್ಕಾರವು ತತಕ್ಷಣ ಕ್ರಮ ವಹಿಸಿದಲ್ಲಿ ರಾಜ್ಯದ ಮೆಕ್ಕೆಜೋಳ ಮತ್ತು ಹೆಸರುಕಾಳು ಬೆಳೆಯುವ ರೈತರ ಬದುಕಿಗೆ ಬಹುದೊಡ್ಡ ನಿರಾಳತೆಯನ್ನು ನೀಡಿದಂತಾಗುತ್ತದೆ ಎಂದಿದ್ದಾರೆ.

Previous articleಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧ
Next articleATM ವ್ಯಾನ್ ದರೋಡೆ ಪ್ರಕರಣ ಬೇಧಿಸಿದ ಅಧಿಕಾರಿಗಳಿಗೆ 5 ಲಕ್ಷ ರೂ ಬಹುಮಾನ

LEAVE A REPLY

Please enter your comment!
Please enter your name here