ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯಕ್ಕೆ ಒಳಗಾಗಿದೆ: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವರ ಆಕ್ರೋಶ

ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ದಾಖಲಾತಿ ನಿರಂತರವಾಗಿ ಕುಸಿಯುತ್ತಿರುವುದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ಪ್ರಕಟವಾದ ವರದಿಯನ್ನು ಹಂಚಿಕೊಂಡಿರುವ ಅವರು, ಯುಡೈಸ್ ಪ್ಲಸ್ (UDISE+) ವರದಿಯ ಅಂಕಿ-ಅಂಶಗಳನ್ನು ಉಲ್ಲೇಖಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೋಶಿ ಅವರ ಪ್ರಕಾರ, 2023-24ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಒಟ್ಟು 1,19,26,303 ವಿದ್ಯಾರ್ಥಿಗಳು ದಾಖಲಾತಿಯಾಗಿದ್ದರು. ಆದರೆ 2024-25ರಲ್ಲಿ … Continue reading ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯಕ್ಕೆ ಒಳಗಾಗಿದೆ: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವರ ಆಕ್ರೋಶ