ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ ರಾಷ್ಟ್ರ ಮಟ್ಟದಲ್ಲಿ 3ನೇ ಸ್ಥಾನ

0
1

2025ರಲ್ಲಿ 564 ಅಂಗಾಂಗ ಕಸಿ ಮೂಲಕ ನೂರಾರು ಜೀವಗಳಿಗೆ ಹೊಸ ಬದುಕು

ಬೆಂಗಳೂರು: ಅಂಗಾಂಗ ದಾನ ಕಾರ್ಯದಲ್ಲಿ ಕರ್ನಾಟಕ ರಾಜ್ಯ 2025ನೇ ಸಾಲಿನಲ್ಲಿ ದೇಶದಲ್ಲೇ ಮೂರನೇ ಸ್ಥಾನ ಪಡೆದುಕೊಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಸಾಧನೆ ರಾಜ್ಯದ ಆರೋಗ್ಯ ವ್ಯವಸ್ಥೆ, ವೈದ್ಯಕೀಯ ತಂಡಗಳ ಸಮರ್ಪಣೆ ಮತ್ತು ಜನಸಾಮಾನ್ಯರ ಮಾನವೀಯ ಸ್ಪಂದನೆಯ ಪ್ರತಿಫಲವಾಗಿದೆ ಎಂದು ಅವರು ಹೇಳಿದರು.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು, ಕಳೆದ ವರ್ಷ 198 ದಾನಿಗಳಿಂದ ಒಟ್ಟು 564 ಅಂಗಾಂಗಗಳನ್ನು ಕಸಿ ಮಾಡಲಾಗಿದ್ದು, ಇದರ ಮೂಲಕ ನೂರಾರು ರೋಗಿಗಳಿಗೆ ಹೊಸ ಜೀವನ ದೊರಕಿದಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 153 ಎಕರೆಗಳಲ್ಲಿ ‘ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನ’ – ಸಚಿವ ಸಂಪುಟದ ಒಪ್ಪಿಗೆ

2025ರ ಅಂಗಾಂಗ ದಾನದ ಪ್ರಮುಖ ಅಂಕಿ-ಅಂಶಗಳು:

ಒಟ್ಟು ದಾನಿಗಳು: 198

ಕಿಡ್ನಿ ಕಸಿ: 306

ಲಿವರ್ ಕಸಿ: 167

ಹೃದಯ ಕಸಿ: 50

ಶ್ವಾಸಕೋಶ ಕಸಿ: 29

ಕಣ್ಣು (Cornea): 288

ರಾಜ್ಯದಲ್ಲಿ 2016ರಿಂದ ಇಂದಿನವರೆಗೂ ಅಂಗಾಂಗ ದಾನಿಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿರುವುದು ಅತ್ಯಂತ ಆಶಾದಾಯಕ ಬೆಳವಣಿಗೆಯಾಗಿದೆ. ಇದು ಸರ್ಕಾರದ ಜನಜಾಗೃತಿ ಕಾರ್ಯಕ್ರಮಗಳು ಹಾಗೂ ವೈದ್ಯಕೀಯ ಮೂಲಸೌಕರ್ಯದ ಸುಧಾರಣೆಗೆ ಸಾಕ್ಷಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: Grok AI: ಎಕ್ಸ್‌ಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ

ಅಂಗಾಂಗ ದಾನದ ಮಹತ್ವವನ್ನು ವಿವರಿಸಿದ ಸಚಿವ ದಿನೇಶ್ ಗುಂಡೂರಾವ್, “ಅಂಗಾಂಗ ದಾನವು ಕೇವಲ ಒಂದು ಕೊಡುಗೆಯಲ್ಲ, ಅದು ಮತ್ತೊಬ್ಬರಿಗೆ ನೀಡುವ ಜೀವದಾನ. ಸಾವಿನ ನಂತರವೂ ನಾವು ಜೀವಂತವಾಗಿ ಉಳಿಯಲು ಸಾಧ್ಯವಾಗಿಸುವ ಮಹತ್ತರ ಕಾರ್ಯ ಇದು” ಎಂದು ಹೇಳಿದರು.

ರಾಜ್ಯದ ಜನತೆಗೆ ಮನವಿ ಮಾಡಿದ ಅವರು, ‘ಜೀವಸಾರ್ಥಕತೆ’ ಕಾರ್ಯಕ್ರಮದೊಂದಿಗೆ ಕೈಜೋಡಿಸಿ, ಅಂಗಾಂಗ ದಾನ ಮಾಡುವ ಮೂಲಕ ಸಾವಿನ ನಂತರವೂ ಜೀವ ಉಳಿಸುವ ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು. “ಸಾವಿನ ನಂತರವೂ ಜೀವಂತವಿರೋಣ, ಜೀವ ಉಳಿಸೋಣ” ಎಂಬ ಸಂದೇಶವನ್ನು ಅವರು ಈ ಮೂಲಕ ಸಾರಿದರು.

Previous articleToxicಗೆ ಮತ್ತಷ್ಟು ತಾರಾ ಮೆರಗು: ಯಶ್‌ ಜೊತೆ ಸುತಾರಿಯಾ ಸಾತ್‌