Home ಸುದ್ದಿ ರಾಜ್ಯ TET ಪರೀಕ್ಷೆ: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್

TET ಪರೀಕ್ಷೆ: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್

0

ಬೆಂಗಳೂರು: ರಾಜ್ಯದ ಶಿಕ್ಷಕರ ಅರ್ಹತಾ ಪರೀಕ್ಷೆ (TET) ದಿನಾಂಕವನ್ನು ಶಾಲಾ ಶಿಕ್ಷಣ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ. ಇಲಾಖೆಯ ಪ್ರಕಾರ, ಡಿಸೆಂಬರ್ 7, 2025 ರಂದು ಟಿಇಟಿ ಪರೀಕ್ಷೆ (Teacher Eligibility Test) ನಡೆಯಲಿದ್ದು, ಡಿಸೆಂಬರ್ 31, 2025 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಶಿಕ್ಷಕರ ಅರ್ಹತಾ ಪರೀಕ್ಷೆ ಕುರಿತ ಅಧಿಕೃತ ಅಧಿಸೂಚನೆ ಶೀಘ್ರದಲ್ಲೇ ಬಿಡುಗಡೆ ಆಗಲಿದೆ ಎಂದು ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳು ಅಕ್ಟೋಬರ್ 23ರಿಂದ ನವೆಂಬರ್ 9ರವರೆಗೆ ಆನ್‌ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ಪರೀಕ್ಷೆಯ ವೇಳಾಪಟ್ಟಿ ಮತ್ತು ಕೇಂದ್ರಗಳ ವಿವರಗಳನ್ನು ಇಲಾಖೆಯ ವೆಬ್‌ಸೈಟ್ ಹಾಗೂ ಪ್ರಕಟಣೆಯ ಮೂಲಕ ಪ್ರಕಟಿಸಲಾಗುವುದು. ಈ ವರ್ಷವೂ ಹಿಂದಿನ ಮಾದರಿಯಂತೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವಿಭಾಗಗಳಿಗೆ ಬೇರೆ ಬೇರೆ ಹಂತದ ಪರೀಕ್ಷೆ ನಡೆಯಲಿದೆ.

ಇದೇ ಸಂದರ್ಭದಲ್ಲಿ ಇಲಾಖೆ ಕಲ್ಯಾಣ ಕರ್ನಾಟಕ ಪ್ರದೇಶದ ಶಿಕ್ಷಕರ ಹುದ್ದೆಗಳ ನೇಮಕಾತಿಗೂ ಸಿಇಟಿ (CET) ಮಾದರಿಯ ಪರೀಕ್ಷೆಯ ಮೂಲಕ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದಾಗಿ ತಿಳಿಸಿದೆ.

ಶಿಕ್ಷಣ ಇಲಾಖೆಯ ಅಧಿಕಾರಿಗಳ ಪ್ರಕಾರ, ಈ ಬಾರಿ ಪಾರದರ್ಶಕತೆ ಮತ್ತು ಸಮಯಪಾಲನೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಪರೀಕ್ಷಾ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್ ಹಾಗೂ ತಂತ್ರಜ್ಞಾನ ಆಧಾರಿತವಾಗಿರಲಿದೆ.

ಟಿ.ಇ.ಟಿ ಪರೀಕ್ಷೆಯ ಉದ್ದೇಶ: ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶಿಕ್ಷಕರ ನೇಮಕಾತಿಗೆ ಅಭ್ಯರ್ಥಿಗಳ ಅರ್ಹತೆಯನ್ನು ನಿರ್ಧರಿಸಲು ಈ ಪರೀಕ್ಷೆ ಕಡ್ಡಾಯವಾಗಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ ಸರ್ಕಾರ ಅಥವಾ ಖಾಸಗಿ ಮಾನ್ಯತೆ ಪಡೆದ ಶಾಲೆಗಳಲ್ಲಿ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಕಾಶ ಸಿಗುತ್ತದೆ.

NO COMMENTS

LEAVE A REPLY

Please enter your comment!
Please enter your name here

Exit mobile version