SK Home Ad
Home ಸುದ್ದಿ ರಾಜ್ಯ ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಸೆಪ್ಟೆಂಬರ್ 3ರವರೆಗೆ ವರುಣನ ಅಬ್ಬರ!

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಸೆಪ್ಟೆಂಬರ್ 3ರವರೆಗೆ ವರುಣನ ಅಬ್ಬರ!

0
18

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಸೆಪ್ಟೆಂಬರ್ 3ರವರೆಗೆ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿರಲಿದೆ.

ಮಲೆನಾಡಿನ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 2 ಮತ್ತು 3ರಂದು ವರ್ಷಧಾರೆ ಚುರುಕಾಗಲಿದ್ದು, ಉತ್ತರ ಒಳನಾಡಿನ ಗದಗ, ಬಳ್ಳಾರಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಸೆಪ್ಟೆಂಬರ್ 3ರ ನಂತರ ಶಿವಮೊಗ್ಗ ಮತ್ತು ಉತ್ತರ ಕನ್ನಡಕ್ಕೆ ಹೊಂದಿಕೊಂಡಿರುವ ಒಳನಾಡಿನ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ನಿರೀಕ್ಷೆಯಿದೆ.

ಇನ್ನು ರಾಜಧಾನಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ದಾವಣಗೆರೆ, ವಿಜಯನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಗರಿಷ್ಠ 29 ಡಿಗ್ರಿ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಕೊಡಗಿನ ಮಡಿಕೇರಿಯಲ್ಲಿ ತಂಪು ವಾತಾವರಣವಿದ್ದು, ಕನಿಷ್ಠ ಉಷ್ಣಾಂಶ 18 ಡಿಗ್ರಿಗೆ ಇಳಿಯುವ ಸಾಧ್ಯತೆಯಿದೆ. ಒಟ್ಟಾರೆಯಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣದೊಂದಿಗೆ ಮಳೆ ಮುಂದುವರಿಯಲಿದೆ.