ಕಸ್ತೂರಿರಂಗನ್ ವರದಿ ಯಥಾವತ್ತಾಗಿ ಒಪ್ಪಲ್ಲ: ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ

ಬೆಂಗಳೂರು: ಪಶ್ಚಿಮ ಘಟ್ಟಗಳ ಸಂರಕ್ಷಣೆ ಹಾಗೂ ಅಲ್ಲಿನ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಕರಡು ಅಧಿಸೂಚನೆಯನ್ನು ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರ ಒತ್ತಾಯಿಸಿದೆ. ಈ ಕುರಿತು ವಿಧಾನಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ ಬಳಿಕ, ಕರಡು ಅಧಿಸೂಚನೆಯನ್ನು ಯಥಾವತ್ತಾಗಿ ಅಂಗೀಕರಿಸಲು ಸಾಧ್ಯವಿಲ್ಲ ಎಂಬ ನಿಲುವನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಅಧಿಸೂಚನೆಯಲ್ಲಿರುವ ಗೊಂದಲಗಳು ಹಾಗೂ ನ್ಯೂನ್ಯತೆಗಳನ್ನು ಸರಿಪಡಿಸುವ ಅಗತ್ಯವಿದ್ದು, ಈ ಸಂಬಂಧ ಸರ್ವಾನುಮತದ ನಿರ್ಣಯವನ್ನೂ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ವರದಿಯಲ್ಲಿನ ಲೋಪಗಳನ್ನು ಪರಿಶೀಲಿಸಲು … Continue reading ಕಸ್ತೂರಿರಂಗನ್ ವರದಿ ಯಥಾವತ್ತಾಗಿ ಒಪ್ಪಲ್ಲ: ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ