SK Home Ad
Home ಸುದ್ದಿ ರಾಜ್ಯ KEA: 4723 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಪ್ರಕ್ರಿಯೆ ಆರಂಭ

KEA: 4723 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಪ್ರಕ್ರಿಯೆ ಆರಂಭ

0
166

ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಹಿಸುದ್ದಿ ನೀಡಿದೆ. ವಿವಿಧ ಇಲಾಖೆಗಳ ಒಟ್ಟು 4,723 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕೆಇಎ ಅಧಿಸೂಚನೆಗಳನ್ನು ಬಿಡುಗಡೆ ಮಾಡಿದೆ.

ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಐಎಎಸ್ ಮಾಹಿತಿ ನೀಡಿದ್ದು, ಕೆಎಸ್‌ಆರ್‌ಪಿ ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಆಡಳಿತಾಧಿಕಾರಿ (VAO), ಭೂಮಾಪಕರು ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿರುವ ವಸತಿ ಶಾಲೆಗಳ ಶಿಕ್ಷಕರ ಹುದ್ದೆಗಳ ಭರ್ತಿಗೆ ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಯುವಜನತೆಗೆ ಉದ್ಯೋಗಾವಕಾಶ: 572 VAO ಹುದ್ದೆಗಳ ನೇಮಕಾತಿ

ಕಲ್ಯಾಣ ಕರ್ನಾಟಕಕ್ಕೂ ಪ್ರತ್ಯೇಕ ಅಧಿಸೂಚನೆ : ಈ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳೂ ಸೇರಿದ್ದು, ಆ ಭಾಗದ ಅಭ್ಯರ್ಥಿಗಳಿಗಾಗಿ ಪ್ರತ್ಯೇಕ ಅಧಿಸೂಚನೆಗಳನ್ನು ಪ್ರಕಟಿಸಲಾಗಿದೆ.

ಯಾವೆಲ್ಲ ಹುದ್ದೆಗಳಿಗೆ ನೇಮಕಾತಿ? : ಕೆಎಸ್‌ಆರ್‌ಪಿ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳು, ಗ್ರಾಮ ಆಡಳಿತಾಧಿಕಾರಿ (VAO) ಹುದ್ದೆಗಳು, ಸರ್ವೆ ಇಲಾಖೆಯ ಭೂಮಾಪಕರ ಹುದ್ದೆಗಳು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಶಿಕ್ಷಕರ ಹುದ್ದೆಗಳು ಸೇರದಂತೆ ಕೆಲವು ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಅರ್ಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ತಮ್ಮ ಅರ್ಹತೆಗೆ ಅನುಗುಣವಾದ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ರಾಜ್ಯ ಪೊಲೀಸ್ ಇಲಾಖೆಗೆ 107 ಹೊಸ ವಾಹನಗಳ ಬಲ ನೀಡಿದ CM

ಕೆಇಎ ಅಧಿಸೂಚನೆಯಲ್ಲಿಯೇ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಿರುವುದರಿಂದ ಅಭ್ಯರ್ಥಿಗಳು ಅದಕ್ಕೆ ಅನುಗುಣವಾಗಿ ತಯಾರಿ ನಡೆಸುವಂತೆ ಸೂಚಿಸಲಾಗಿದೆ.

ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕವನ್ನು ಗಮನದಲ್ಲಿಟ್ಟುಕೊಂಡು, ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ಅರ್ಜಿ ಸಲ್ಲಿಸಿ ಪರೀಕ್ಷಾ ಶುಲ್ಕ ಪಾವತಿಸುವಂತೆ ಕೆಇಎ ಮನವಿ ಮಾಡಿದೆ.

ಇದನ್ನೂ ಓದಿ: ವಿಯೆಟ್ನಾಂನಲ್ಲಿ ಭಾರತೀಯರಿದ್ದ ಬೋಟ್ ಮುಳುಗಡೆ: 15 ಸಾವು!

ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಹಿತಿ : ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆ, ಅರ್ಹತೆ, ಪರೀಕ್ಷಾ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಪಡೆಯಬಹುದು.

ರಾಜ್ಯದಲ್ಲಿ ಒಂದೇ ಬಾರಿ 4,723 ಸರ್ಕಾರಿ ಹುದ್ದೆಗಳ ನೇಮಕಾತಿ ನಡೆಯುತ್ತಿರುವುದು ಉದ್ಯೋಗಾಕಾಂಕ್ಷಿಗಳಿಗೆ ದೊಡ್ಡ ಅವಕಾಶವಾಗಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ಯುವಕರಿಗೆ ಸರ್ಕಾರಿ ಸೇವೆಗೆ ಸೇರುವ ಅವಕಾಶವನ್ನು ಇದು ಒದಗಿಸಲಿದೆ.