Home Advertisement
Home ಸುದ್ದಿ ರಾಜ್ಯ KEA ಮೂಲಕ ಹೊಸ ಉದ್ಯೋಗ ಅವಕಾಶ: ಸಂಪೂರ್ಣ ವಿವರ ಇಲ್ಲಿದೆ

KEA ಮೂಲಕ ಹೊಸ ಉದ್ಯೋಗ ಅವಕಾಶ: ಸಂಪೂರ್ಣ ವಿವರ ಇಲ್ಲಿದೆ

0
95

ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರದಲ್ಲಿ 19 ಹುದ್ದೆಗಳ ನೇಮಕಾತಿ: KEA ಅಧಿಸೂಚನೆ ಪ್ರಕಟ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಪ್ರಮುಖ ಅವಕಾಶವೊಂದನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿದೆ. ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ (KSLSA)ಯಲ್ಲಿ ಖಾಲಿ ಇರುವ 19 ಸೆಕ್ಷನ್ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

KEA ಬಿಡುಗಡೆ ಮಾಡಿದ ಅಧಿಸೂಚನೆಯ ಪ್ರಕಾರ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 2026ರ ಮೇ 15ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

ಒಟ್ಟು 19 ಹುದ್ದೆಗಳ ಪೈಕಿ, ಕಲ್ಯಾಣ ಕರ್ನಾಟಕ ವೃಂದಕ್ಕೆ 2 ಹುದ್ದೆಗಳು ಮೀಸಲಾಗಿದ್ದು, ಉಳಿದ 17 ಹುದ್ದೆಗಳು ಇತರೆ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕಾನೂನು ಪದವೀಧರರಾಗಿರಬೇಕು ಎಂಬುದು ಪ್ರಮುಖ ಅರ್ಹತೆಯಾಗಿದೆ.

ಅಭ್ಯರ್ಥಿಗಳು KEA ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಅರ್ಜಿ ಪ್ರಕ್ರಿಯೆ, ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ನಿಯಮಾವಳಿಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದಾಗಿದೆ.

ಈ ಕುರಿತು KEA ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್ ಪ್ರಸನ್ನ ಮಾಹಿತಿ ಹಂಚಿಕೊಂಡಿದ್ದು, ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ಮನವಿ ಮಾಡಿದ್ದಾರೆ.