SK Home Ad
Home ಸುದ್ದಿ ರಾಜ್ಯ ಭಯೋತ್ಪಾದಕ ಸಂಘಟನೆ ಜತೆ ನಂಟು: ಶಂಕಿತ ಉಗ್ರನ ಬಂಧನ

ಭಯೋತ್ಪಾದಕ ಸಂಘಟನೆ ಜತೆ ನಂಟು: ಶಂಕಿತ ಉಗ್ರನ ಬಂಧನ

0
6

ಕಲಬುರಗಿ: ಉಗ್ರರೊಂದಿಗೆ ನಂಟು ಹೊಂದಿದ್ದ ಮತ್ತೊಬ್ಬ ಶಂಕಿತ ಉಗ್ರನನ್ನು ಪೊಲೀಸರು ಕಲಬುರಗಿಯಲ್ಲಿ ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ತವರೂರಿನಲ್ಲೇ ಅದು ಕೂಡ ಅವರು ಜಿಲ್ಲಾ ಪ್ರವಾಸ ಕೈಗೊಂಡಿರುವ ಸಮಯದಲ್ಲೇ ಶಂಕಿತ ಉಗ್ರ ಸಿಕ್ಕುಬಿದ್ದಿರುವುದು ಸ್ಥಳೀಯ ನಾಗರಿಕರನ್ನು ಬೆಚ್ಚಿ ಬೀಳಿಸಿ, ಆತಂಕವನ್ನುಂಟು ಮಾಡಿದೆ.

ಪಶ್ಚಿಮ ಬಂಗಾಳದ ಮಮ್ತಾಜ್ ವುಲ್ ಮಲೀಕ್ ಶಂಕಿತ ಉಗ್ರನಾಗಿದ್ದಾನೆ. ಕೇಂದ್ರೀಯ ಗುಪ್ತಚರ ಇಲಾಖೆ ಹಾಗೂ ಸ್ಥಳೀಯ ಪೊಲೀಸರ ಜಂಟಿ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಲಷ್ಕರ್ ಇ ತೊಯ್ಬಾ ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ಎನ್ನಲಾಗುತ್ತಿರುವ ಈ ಶಂಕಿತ ಉಗ್ರನನ್ನು ವಶಕ್ಕೆ ಪಡೆದಿದ್ದಾರೆ.

ಚಿನ್ನದಂಗಡಿಯಲ್ಲಿ ಕೆಲಸ ಮಾಡುತ್ತಿದ್ದ: ಪಶ್ಚಿಮ ಬಂಗಾಳದ ಮಮ್ತಾಜ್ ವುಲ್ ಮಲೀಕ್ ಕಲಬುರಗಿ ನಗರದ ಸರಾಫ್ ಬಜಾರ್‌ನಲ್ಲಿ ಸಹೋದರನೊಂದಿಗೆ ಚಿನ್ನಾಭರಣ ಕೆಲಸ ಮಾಡುತ್ತಿದ್ದ. ಈತ ಸಾಮಾಜಿಕ ಜಾಲತಾಣಗಳ ಮೂಲಕ ಲಷ್ಕರ್ ಇ ತಯ್ಯಾಬಾದ ಖಾತೆಯೊಂದಿಗೆ ಸಂಪರ್ಕ ಹೊಂದಿದ್ದ ಎನ್ನಲಾಗುತ್ತಿದೆ. ಹಲವು ಮಹತ್ವದ ವಿಷಯಗಳನ್ನು ಮೆಸೇಜ್ ಮೂಲಕ ಹಂಚಿಕೊಂಡಿದ್ದು, ಈ ಮಾಹಿತಿ ಕೇಂದ್ರೀಯ ಗುಪ್ತಚರ ಇಲಾಖೆಗೆ ಗೊತ್ತಾಗಿದೆ. ಈ ಹಿನ್ನೆಲೆ ಅವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬ್ರಹ್ಮಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಅಂದು ಸಮೀರ್ ಬಂಧನ: ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಮಹಮ್ಮದ್ ಸಮೀರ್ (23) ಎಂಬಾತನನ್ನು ಕಲಬುರಗಿ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಬಂಧಿಸಿದ್ದರು. ತನಿಖೆ ವೇಳೆ ಸ್ಫೋಟಕ ವಿಚಾರಗಳು ಬಯಲಾಗಿದೆ. ಪಾಕ್ ಜೊತೆ ಸಮೀರ್ ನಿರಂತರ ಸಂಪರ್ಕ ಹೊಂದಿದ್ದ ಎಂಬ ಮಾಹಿತಿ ಬೆಳಕಿಗೆ ಬಂದಿತ್ತು.

ಭಯೋತ್ಪಾದಕ ಸಂಘಟನೆಗಳ ಲಿಂಕ್: ಸಮೀರ್ ಬಂಧನದ ಬಳಿಕ ಮತ್ತಷ್ಟು ರೋಚಕ ಮಾಹಿತಿ ಬೆಳಕಿಗೆ ಬಂದಿದ್ದು, ಈತ ವಿದೇಶಿ ಮೂಲದ ಮೊಬೈಲ್ ಸಂಖ್ಯೆಗಳ ಬಳಕೆ ಮಾಡ್ತಿದ್ದನಂತೆ. ಇದ್ರಿಂದಲೇ ವಾಟ್ಸಾಪ್ ಮತ್ತು ಇನ್‌ಸ್ಟಾಗ್ರಾಮ್​ ಮೂಲಕ ಹಲವರ ಜೊತೆ ಸಂಪರ್ಕ ಹೊಂದಿದ್ದ ಎಂಬ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯ ಅಬೀದ್ ಜಟ್, ಶಹಜಾದ್ ಭಟ್ಟಿ ಜೊತೆಯೂ ಸಮೀರ್​​ಗೆ ಲಿಂಕ್ ಇತ್ತು ಎಂಬ ಮಾಹಿತಿ ಕೂಡ ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದಷ್ಟೇ ನಗರದ ಕಸಾಯಿಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ ಯುವಕನನ್ನು ಬಂಧಿಸಲಾಗಿತ್ತು. ಇದೀಗ ಮತ್ತೊಬ್ಬ ಶಂಕಿತ ಉಗ್ರನನ್ನ ಪೊಲೀಸರು ವಶಕ್ಕೆ ಪಡಿದಿದ್ದು, ಜನರಲ್ಲಿ ಆತಂಕ ಹೆಚ್ಚಿದೆ.

ಅಂದು ಸಮೀರ್ ಬಂಧನ: ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಮಹಮ್ಮದ್ ಸಮೀರ್ (23) ಎಂಬಾತನನ್ನು ಗುಲಬರ್ಗಾ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಬಂಧಿಸಿದ್ದರು. ತನಿಖೆ ವೇಳೆ ಸ್ಫೋಟಕ ವಿಚಾರಗಳು ಬಯಲಾಗಿದ್ದವು. ಪಾಕ್ ಜೊತೆ ಸಮೀರ್ ನಿರಂತರ ಸಂಪರ್ಕ ಹೊಂದಿದ್ದ ಎಂಬ ಮಾಹಿತಿ ಬೆಳಕಿಗೆ ಬಂದಿತ್ತು.

ಭಯೋತ್ಪಾದಕ ಸಂಘಟನೆಗಳ ಲಿಂಕ್: ಸಮೀರ್ ಬಂಧನದ ಬಳಿಕ ಮತ್ತಷ್ಟು ರೋಚಕ ಮಾಹಿತಿ ಬೆಳಕಿಗೆ ಬಂದಿದ್ದು, ಈತ ವಿದೇಶಿ ಮೂಲದ ಮೊಬೈಲ್ ಸಂಖ್ಯೆಗಳ ಬಳಕೆ ಮಾಡುತ್ತಿದ್ದನಂತೆ. ಇದ್ರಿಂದಲೇ ವಾಟ್ಸಾಪ್ ಮತ್ತು ಇನ್‌ಸ್ಟಾಗ್ರಾಮ್​ ಮೂಲಕ ಹಲವರ ಜೊತೆ ಸಂಪರ್ಕ ಹೊಂದಿದ್ದ. ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯ ಅಬೀದ್ ಜಟ್, ಶಹಜಾದ್ ಭಟ್ಟಿ ಜೊತೆಯೂ ಸಮೀರ್​​ಗೆ ಲಿಂಕ್ ಇತ್ತು ಎಂಬ ಮಾಹಿತಿ ಕೂಡ ಬೆಳಕಿಗೆ ಬಂದಿದೆ.

ಮೊಬೈಲ್​​ನಲ್ಲಿ ಸ್ಫೋಟಕ ಮಾಹಿತಿ: ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದ ಸಮೀರ್ ಮೊಬೈಲ್​ನಲ್ಲಿ ಉಗ್ರರ ಫೋಟೋ, ವಿಡಿಯೋಗಳು ಪತ್ತೆಯಾಗಿವೆ. ಸಮೀರ್ ಮೊಬೈಲ್‌ನಲ್ಲಿ ಸಿಕ್ಕ ವಿಡಿಯೋಗಳಲ್ಲಿ ಭಾರತವನ್ನು ವಿರೋಧಿಸುವ ವಿಡಿಯೋಗಳೇ ಅತಿ ಹೆಚ್ಚು ಪತ್ತೆಯಾಗಿದೆ.