SK Home Ad
Home ಸುದ್ದಿ ರಾಜ್ಯ ಮಹರ್ಷಿ ವಾಲ್ಮೀಕಿ ಜಯಂತಿ: ಅ. 26ರಂದು ಸಾರ್ವತ್ರಿಕ ರಜೆ

ಮಹರ್ಷಿ ವಾಲ್ಮೀಕಿ ಜಯಂತಿ: ಅ. 26ರಂದು ಸಾರ್ವತ್ರಿಕ ರಜೆ

0
31

ಬೆಂಗಳೂರು: 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ, ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಅ. 26ರಂದು ಸಾರ್ವತ್ರಿಕ ರಜೆ ಘೋಷಿಸಿದೆ.

ಈ ಮೊದಲು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ. 25ರ ಭಾನುವಾರದಂದು ಆಚರಿಸುವುದಾಗಿ ಸಾರ್ವತ್ರಿಕ ರಜಾ ಪಟ್ಟಿಯಲ್ಲಿ ಘೋಷಿಸಲಾಗಿತ್ತು. ಇದೀಗ ಸೀಗಿ ಹುಣ್ಣಿಮೆ ದಿನವಾದ ಅ. 26ರ ಸೋಮವಾರದಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲು ರಜೆ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಹೀಗಾಗಿ ಅ. 26ರಂದು ರಾಜ್ಯದ ಸರ್ಕಾರಿ ಕಚೇರಿಗಳು ಸೇರಿದಂತೆ ರಜೆ ಅನ್ವಯಿಸುವ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಇರಲಿದೆ.