ಮೈಸೂರು: ಅ.17ಕ್ಕೆ ಬೃಹತ್ ಉದ್ಯೋಗ ಮೇಳ, 200ಕ್ಕೂ ಹೆಚ್ಚು ಕಂಪನಿ ಭಾಗಿ

0
118

ಮೈಸೂರು: ರಾಜ್ಯದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆಯಿಟ್ಟಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಮೂಲಕ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (KSDC) ವತಿಯಿಂದ ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಅಕ್ಟೋಬರ್ 17, 2025ರಂದು ಮೈಸೂರಿನ ಮಹಾರಾಜ ಮೈದಾನದಲ್ಲಿ ಈ ಬೃಹತ್ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳ ಘನ ನೇತೃತ್ವದಲ್ಲಿ ನಡೆಯಲಿರುವ ಈ ಮೇಳವು ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸುವ ಸರ್ಕಾರದ ಬದ್ಧತೆಯನ್ನು ಎತ್ತಿ ತೋರಿಸುತ್ತದೆ.

200ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗಿ: ಉದ್ಯೋಗ ಮೇಳದಲ್ಲಿ 200ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು, ಅವುಗಳು ವಿವಿಧ ಕ್ಷೇತ್ರಗಳಲ್ಲಿ ಲಭ್ಯವಿರುವ ಸಾವಿರಾರು ಉದ್ಯೋಗಾವಕಾಶಗಳನ್ನು ನೀಡಲಿವೆ. ಅಭ್ಯರ್ಥಿಗಳು ಒಂದೇ ಸೂರಿನಡಿ ಹಲವಾರು ಕಂಪನಿಗಳ ಮಾನವ ಸಂಪನ್ಮೂಲ ಅಧಿಕಾರಿಗಳನ್ನು ಭೇಟಿ ಮಾಡಿ ನೇರ ಸಂದರ್ಶನಗಳಲ್ಲಿ ಭಾಗವಹಿಸಬಹುದಾಗಿದೆ.

ಇವರೆಲ್ಲರೂ ಭಾಗವಹಿಸಬಹುದು: SSLC, PUC, ಪದವಿ, ಸ್ನಾತಕೋತ್ತರ ಪದವಿ, ಐಟಿಐ ಮತ್ತು ಡಿಪ್ಲೊಮಾ ವಿದ್ಯಾರ್ಹತೆಯನ್ನು ಹೊಂದಿರುವ ಉದ್ಯೋಗಾಕಾಂಕ್ಷಿಗಳು ಈ ಮೇಳದಲ್ಲಿ ಭಾಗವಹಿಸಲು ಅರ್ಹರು.

ನೋಂದಣಿ ಮತ್ತು ಅವಶ್ಯಕತೆಗಳು: ಈ ಮಹತ್ವದ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಚಿಸುವವರು ಮೊದಲೇ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ. ನೋಂದಣಿಗಾಗಿ ಈ ವೆಬ್‌ಸೈಟ್‌ಗೆ ಭೇಟಿ ನೀಡಿ: jobmela.ksdc.karnataka.gov.in ಉದ್ಯೋಗಾಕಾಂಕ್ಷಿಗಳು ಸಂದರ್ಶನಕ್ಕೆ ಹಾಜರಾಗುವಾಗ ತಮ್ಮ ರೆಸ್ಯೂಮ್ ಪ್ರತಿಯೊಂದಿಗೆ ಆಗಮಿಸಬೇಕು.

ಹೆಚ್ಚಿನ ಮಾಹಿತಿ ಹಾಗೂ ಸ್ಪಷ್ಟೀಕರಣಕ್ಕಾಗಿ ಆಸಕ್ತರು 9606494308 ಈ ಸಂಖ್ಯೆಗೆ ಕರೆ ಮಾಡಬಹುದು. ಕರ್ನಾಟಕ ಸರ್ಕಾರದ ಈ ಉಪಕ್ರಮವು ರಾಜ್ಯದ ಯುವಜನರ ಕೌಶಲ್ಯ ಮತ್ತು ಉದ್ಯೋಗಶೀಲತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

Previous articleಬೆಳಗಾವಿ: ಬೀದಿನಾಯಿ ಹಾವಳಿ ಹೆಚ್ಚಳ
Next articleಹಂಗೇರಿಯನ್ ಲೇಖಕ ಲಾಸ್ಜ್ಲೋ ಕ್ರಾಸ್ನಾಹೋರ್ಕೈಗೆ 2025ರ ಸಾಹಿತ್ಯ ನೊಬೆಲ್ ಪ್ರಶಸ್ತಿ

LEAVE A REPLY

Please enter your comment!
Please enter your name here