ಬೆಂಗಳೂರು: ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋದ ಪಿಂಕ್ ಲೈನ್ಗೆ ಚಾಲನೆ ನೀಡಿದರು. ಬಳಿಕ ಆರು ಕೋಚ್ಗಳ ಮೆಟ್ರೋ ರೈಲಿನಲ್ಲಿ ಗಣ್ಯರೊಂದಿಗೆ ಪ್ರಯಾಣ ಬೆಳೆಸಿದರು.
ಪ್ರಧಾನಿ ಮೋದಿ ಅವರೊಂದಿಗೆ ರಾಜ್ಯಪಾಲೆ ಡಾ. ಸುಧಾ ಯಾದವ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಕೃಷ್ಣಬೈರೇಗೌಡ, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳು ಪ್ರಯಾಣಿಸಿದರು.
ಪ್ರಶಾಂತಿ ಕುಟೀರದಿಂದ ಹೆಲಿಕಾಪ್ಟರ್ ಮೂಲಕ ತಾವರೆಕೆರೆಗೆ ಆಗಮಿಸಿದ ಮೋದಿಗೆ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದರು. ರಸ್ತೆಯುದ್ದಕ್ಕೂ ಜಮಾಯಿಸಿದ್ದ ಕಾರ್ಯಕರ್ತರು ಮೋದಿ ಪರ ಘೋಷಣೆಗಳನ್ನು ಕೂಗಿದರು. ಇದಕ್ಕೆ ಪ್ರತಿಯಾಗಿ ಮೋದಿ ಕೂಡ ಕೈಬೀಸುತ್ತಾ ಮೆಟ್ರೋ ನಿಲ್ದಾಣಕ್ಕೆ ತೆರಳಿದರು.




















