Home Advertisement
Home ಸುದ್ದಿ ರಾಜ್ಯ ವಿದ್ಯಾರ್ಥಿಗಳ ಆತ್ಮಹತ್ಯೆಗೆ ಮೋದಿ ಸರ್ಕಾರ ಕಾರಣ

ವಿದ್ಯಾರ್ಥಿಗಳ ಆತ್ಮಹತ್ಯೆಗೆ ಮೋದಿ ಸರ್ಕಾರ ಕಾರಣ

0
28

ತುಮಕೂರು: ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ‌ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತ್ಮಹತ್ಯೆಗೆ ಮೋದಿ ಸರ್ಕಾರ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ಮೂರು ವರ್ಷಗಳ ಸಾಧನಾ ಸಮರ್ಪಣಾ ಸಮಾವೇಶವನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಅವರು, ರಾಜ್ಯದ CET ಮಾದರಿಯಲ್ಲಿ ಪರೀಕ್ಷೆ ನಡೆಸಿ ಎನ್ನುವ ನಮ್ಮ ಸಲಹೆಯನ್ನು ತಿರಸ್ಕರಿಸಿ ನೀಟ್‌ನಲ್ಲಿ ಅದ್ವಾನ ಮಾಡಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗದ ಭರವಸೆ ನೀಡಿದ್ದ ಮೋದಿಯ ಅಚ್ಚೇ ದಿನ ಬರಲಿಲ್ಲ ಎಂದರು.

ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳ‌ ಆತ್ಮಹತ್ಯೆ ತಡೆಯದ ಮೋದಿ ಸರ್ಕಾರ, ರೈತರ ಆದಾಯವನ್ನೂ ದುಪ್ಪಟ್ಟು ಮಾಡಲಿಲ್ಲ. ಕಪ್ಪು ಹಣ ತರಲಿಲ್ಲ. ಹೀಗಾಗಿ ಬಿಜೆಪಿ-ಆರ್‌ಎಸ್ಎಸ್ ಸರ್ಕಾರ ಸಂಪೂರ್ಣ ವಿಫಲವಾಗಿ ದೇಶದ ಸಾಲವನ್ನು 220 ಲಕ್ಷ ಕೋಟಿಗೆ ಹೆಚ್ಚಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾವು ನೆಮ್ಮದಿಯ ನಾಡು ಕಟ್ಟುವ ಸರ್ಕಾರ ಕೊಟ್ಟಿದ್ದೇವೆ. ಮೋದಿ ದೇಶದ ನೆಮ್ಮದಿ ಕಸಿಯುವ ಸರ್ಕಾರ ಕೊಟ್ಟಿದ್ದಾರೆ ಎಂದರು.