ಹೆಚ್ಚೆಚ್ಚು GST ವಿಧಿಸಿ ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿ…

1
16

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಮಹಾರಾಜ ಕಾಲೇಜು ಮೈದಾನದಲ್ಲಿ ದಸರಾ ಆಹಾರ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಎಂಟು ವರ್ಷ ವಿಪರೀತ GST ವಸೂಲಿ ಮಾಡಿದ್ರಲ್ಲಾ ಪ್ರಧಾನಿ ಮೋದಿಯವರೇ ಅದೆಲ್ಲವನ್ನೂ ಭಾರತೀಯರಿಗೆ ವಾಪಾಸ್ ಕೊಡ್ತೀರಾ ಎಂದು ಪ್ರಶ್ನಿಸಿದರು.

GST 18%, 28% ಹೆಚ್ಚಿಸಿದ್ದರ ಬಗ್ಗೆ ವಿರೋಧ ಮಾಡಿದವರು ನಾವು. ಇಷ್ಟು ವರ್ಷ ವಸೂಲಿ ಮಾಡಿದವರೇ ಈಗ ಕ್ರೆಡಿಟ್ ತಗೊತಾ ಇದಾರೆ. ಭಾರತೀಯರಿಗೆ ಎಷ್ಟು ನಾಜೂಕಾಗಿ ಟೋಪಿ ಹಾಕ್ತಾರೆ ನೋಡಿ. ನೀವು ಇದಕ್ಕೆಲ್ಲಾ ಮರಳಾಗಬಾರದು ಎಂದರು.

ಬಡವರು ಖಾಲಿ ಹೊಟ್ಟೆಯಲ್ಲಿ ಮಲಗಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದು 10 ಕೆಜಿ ಅಕ್ಕಿ ಕೊಟ್ಟಿದ್ದೇ ಈ ಸಿದ್ದರಾಮಯ್ಯ ಎಂದರು.

ಮಾಜಿ ಸಂಸದರಿಗಿಂತ ನಾನು ಉತ್ತಮ ಹಿಂದು: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ವಿರೋಧಿಸಿದವರಿಗೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಚಾಟಿ ಬೀಸಿದ್ದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, “ನನ್ನ ಹೆಸರಲ್ಲೇ ಇಬ್ಬರು ದೇವರಿದ್ದಾರೆ. ಸಿದ್ದ ಅಂದರೆ ಶಿವ, ರಾಮ ಅಂದರೆ ವಿಷ್ಣು” ಹೀಗಾಗಿ ಬಾನು ಮುಷ್ತಾಕ್‌ಗೆ ವಿರೋಧ ವ್ಯಕ್ತಪಡಿಸಿದ ಮೂರ್ಖರಿಗೆ ಸುಪ್ರೀಂಕೋರ್ಟ್, ಸಂವಿಧಾನದ ಪೀಠಿಕೆ ಓದಲು ಹೇಳಿದೆ ಎಂದರು.

ಬಾನು ಮುಷ್ತಾಕ್ ಅವರಿಗೆ ಎರಡು ಬಾರಿ ಸಂಸದರಾಗಿದ್ದವರು ವಿರೋಧ ವ್ಯಕ್ತಪಡಿಸಿದ್ದರು. ದಸರಾ ನಾಡ ಹಬ್ಬ ಎನ್ನುವುದೂ ಕೂಡ ಗೊತ್ತಿಲ್ಲ ಅವರಿಗೆ. ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೋಗಿ ಸೋತರು. ನನ್ನ ಹಸರಲ್ಲೇ ಇಬ್ಬರು ದೇವರನ್ನು ಹೊಂದಿರುವ ನಾನು ಅವರಿಗಿಂತ ಉತ್ತಮ ಹಿಂದು ಎಂದರು.

Previous articleಸಂಸದರ ಪತ್ನಿ ಡಿಜಿಟಲ್ ಅರೆಸ್ಟ್: ಲಕ್ಷ ಲಕ್ಷ ರೂ. ಹಣ ವಂಚನೆ
Next articleಜಾತಿಗಣತಿ: ಮಧ್ಯಂತರ ತಡೆ ನೀಡದ ಕೋರ್ಟ್, ಮಂಗಳವಾರದತ್ತ ಚಿತ್ತ

1 COMMENT

  1. ಕಳ್ಳಬಡ್ಡೀಮಗನೇ ನೀವು ಅಧಿಕಾರ ಸ್ವೀಕರಿಸಿದ ನಂತರ ಈ ವರೆಗೆ ಯಾವ್ಯಾವ ಸರಕು ಮತ್ತು ಸೇವೆಗಳಿಗೆ ಎಷ್ಟೆಷ್ಟು ಬೆಲೆ ಏರಿಸಿದ್ದೀಯ ಅನ್ನೋದನ್ನು ಹೇಳು. ಬಿಟ್ಟಿ ಭಾಗ್ಯಗಳಿಗಾಗಿ ದುಡ್ಡು ಹೊಂಚಿಸುವುದಕ್ಕಾಗಿ ರಾಜ್ಯದ ಜನರ ಜೀವನವನ್ನು ನರಕ ಮಾಡಿರುವ ನಿನಗೆ ಮೋದಿಜೀ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ ಹೇಳಯ್ಯಾ. ಸುಳ್ಳಿನ ಮೇಲೆ ಸುಳ್ಳು ಹೇಳಿ ಜನರನ್ನು ಮಂಗ ಮಾಡಿದ್ದು ಸಾಕು. ನಿನಗೆ ರಾಜ್ಯದ ಜನತೆ ಬಗ್ಗೆ ಕಾಳಜಿ ಇದ್ದರೆ ಹೆಚ್ಚಿಸಿರುವ ಬೆಲೆಗಳನ್ನು ಇಳಿಸು ನೋಡೋಣ. ನಿನ್ನಪ್ಪನಾಣೆ ಇದು ಸಾಧ್ಯವೇ.

LEAVE A REPLY

Please enter your comment!
Please enter your name here