SK Home Ad
Home ಸುದ್ದಿ ರಾಜ್ಯ ಮುಂಗಾರು ಚುರುಕು: ಐದು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್

ಮುಂಗಾರು ಚುರುಕು: ಐದು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್

0
24

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂಗಾರು ಚುರುಕುಗೊಂಡಿದ್ದು, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ.

ಶೃಂಗೇರಿಯ ಬೆಗಾರ್‌ನಲ್ಲಿ ಗರಿಷ್ಠ 87.5 ಮಿ.ಮೀ ಮಳೆ ದಾಖಲಾಗಿದೆ. ಮುಂದಿನ 48 ಗಂಟೆಗಳಲ್ಲಿ ಸಿಡಿಲು-ಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.