SK Home Ad
Home ಸುದ್ದಿ ರಾಜ್ಯ ಜನರ ತೆರಿಗೆ ಹಣದಿಂದಲೇ ಮೈಸೂರು ಅರಮನೆ ನಿರ್ಮಾಣ

ಜನರ ತೆರಿಗೆ ಹಣದಿಂದಲೇ ಮೈಸೂರು ಅರಮನೆ ನಿರ್ಮಾಣ

0
2

ಮೈಸೂರು: ಮೈಸೂರು ಅರಮನೆಯನ್ನು ಮಹಾರಾಜರೇ ನಿರ್ಮಿಸಿದ್ದಾರೆ. ಆದರೆ ಅದಕ್ಕೆ ಬಳಸಿದ್ದು ಜನರ ತೆರಿಗೆ ಹಣ. ಹೀಗಾಗಿ ಅರಮನೆ ಸೇರಿದಂತೆ ಎಲ್ಲವೂ ಜನರಿಗೆ ಸೇರಬೇಕು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ದಸರಾ ಸಂದರ್ಭದಲ್ಲಿ ಒಂದಿಷ್ಟು ಗೊಂದಲ ಉಂಟಾಗಿದೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರೊಂದಿಗೆ ಮಾತುಕತೆ ನಡೆಸಿ ಎಲ್ಲ ಗೊಂದಲಗಳನ್ನು ಬಗೆಹರಿಸಿಕೊಳ್ಳಲಿದ್ದಾರೆ ಎಂದರು.

ಸ್ಟಿಂಗ್ ಆಪರೇಷನ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ಎಲ್ಲರೂ ತಾಳ್ಮೆಯಿಂದ ಕಾಯಬೇಕು. ತನಿಖೆಗೆ ಅವಸರ ಮಾಡಲು ಸಾಧ್ಯವಿಲ್ಲ. ತಾಳ್ಮೆಯಿಂದ ಇದ್ದರೆ ಎಲ್ಲ ಸತ್ಯಗಳು ಹೊರಬರಲಿವೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಮನೆಯಲ್ಲೇ ಆರೋಪಿಯ ಮೊಬೈಲ್ ನೆಟ್‌ವರ್ಕ್ ಪತ್ತೆಯಾಗಿದೆ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ತಮ್ಮ ತಂದೆ ಸಿದ್ದರಾಮಯ್ಯ ಅವರು ಮಾತ್ರ ಹೈಕಮಾಂಡ್ ಜೊತೆ ಮಾತನಾಡಿದ್ದಾರೆ. ಸ್ಟಿಂಗ್ ವಿಚಾರವೂ ಚರ್ಚೆಯಾಗಿರಬಹುದು. ತಂದೆ ಹಾಗೂ ಸಚಿವ ಎಚ್.ಸಿ. ಮಹದೇವಪ್ಪ ಅವರ ನಡುವಿನ ಸಂಬಂಧ ಹದಗೆಟ್ಟಿಲ್ಲ. ಅವರಿಬ್ಬರದ್ದು 40 ವರ್ಷಗಳ ಸ್ನೇಹ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗಿರಬಹುದು. ಅದನ್ನು ಅವರೇ ಬಗೆಹರಿಸಿಕೊಳ್ಳುತ್ತಾರೆ ಎಂದರು.

ಸರ್ಕಾರದ ವತಿಯಿಂದ ನಡೆಯುವ ಸಂವಿಧಾನ ದಿನಾಚರಣೆಗೆ ಎಚ್.ಸಿ.ಮಹದೇವಪ್ಪ ಅವರನ್ನು ಆಹ್ವಾನಿಸಿದ್ದೇನೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.