Home ಸುದ್ದಿ ರಾಜ್ಯ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು – ಶುಭ ಹಾರೈಸಿದ...

ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು – ಶುಭ ಹಾರೈಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

0

ಬೆಂಗಳೂರು : ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು .

ಅವರು ಇಂದು ಕಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಮೂಲತ: ಮೈಸೂರು ಜಿಲ್ಲೆಯವರಾದ ಕುಮಾರ ಎಂಬುವರು ಅಮೆರಿಕಾದಲ್ಲಿ ನೆಲೆಸಿದ್ದು, ಇದರ ಏಜೆನ್ಸಿ ಪಡೆದಿದ್ದಾರೆ. ಕೆಎಂಎಫ್ ಹಾಗೂ ಕುಮಾರ ಅವರಿಗೆ ಶುಭವಾಗಲಿ ಎಂದು ಹಾರೈಸಿದರು.

ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು: ಶಾಸಕರ ಮತ್ತೊಂದು ತಂಡ ದೆಹಲಿಗೆ ಭೇಟಿ ನೀಡಿರುವ ಬಗ್ಗೆ ಮಾತನಾಡಿ ಹೈ ಕಮಾಂಡ್ ಅವರನ್ನು ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ಎಂದು ನೋಡೋಣ ಎಂದರು. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದರು.

ರಾಹುಲ್ ಗಾಂಧಿ ಭೇಟಿ ಸದ್ಯಕ್ಕಿಲ್ಲ: ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು ಎಂದರು. ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಇರಾದೆ ಸದ್ದಕ್ಕಿಲ್ಲ ಎಂದೂ ಕೂಡ ಅವರು ತಿಳಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version