ನೆಲಮಂಗಲದ ಬಳಿ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

0
47

ನೆಲಮಂಗಲ: ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ನೆಲಮಂಗಲ ತಾಲೂಕಿನ ಟಿ. ಬೇಗೂರು ಸಮೀಪ ಸಂಭವಿಸಿದೆ.

ಮಾಹಿತಿಯ ಪ್ರಕಾರ, ಗದಗ ಜಿಲ್ಲೆಯ ರೋಣಾದಿಂದ ಬೆಂಗಳೂರಿನ ನಾರಾಯಣ ಆಸ್ಪತ್ರೆಗೆ ಬರುತ್ತಿದ್ದ ಮಾರುತಿ ಎರ್ಟಿಗಾ ಕಾರು, ಮುಂದೆ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮವಾಗಿ ಕಾರು ನಿಯಂತ್ರಣ ತಪ್ಪಿ ಲಾರಿಗೆ ಢಿಕ್ಕಿ ಹೊಡೆದಿರುವುದು ತಿಳಿದುಬಂದಿದೆ.

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಶಿವಲಿಂಗ ಗೌಡ (60) ಮತ್ತು ಪ್ರಮೀಳಾ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮತ್ತು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ಪರಿಣಾಮವಾಗಿ ಹೆದ್ದಾರಿಯಲ್ಲಿ ಕೆಲವು ಸಮಯ ಸಂಚಾರ ದಟ್ಟಣೆ ಉಂಟಾಗಿ ವಾಹನಗಳು ನಿಧಾನವಾಗಿ ಚಲಿಸಬೇಕಾಯಿತು.

ಪೊಲೀಸರು ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

Previous articleಬೃಹತ್ ಬೆಂಗಳೂರಿಗೆ ಆನೇಕಲ್ ಸೇರ್ಪಡೆ: ಡಿಕೆಶಿ ಕೊಟ್ಟ ಗುಡ್ ನ್ಯೂಸ್!
Next articleಜಾಹೀರಾತು ಲೋಕದ ದಂತಕಥೆ ಪಿಯೂಷ್ ಪಾಂಡೆ ಅಗಲಿಕೆ

LEAVE A REPLY

Please enter your comment!
Please enter your name here