Home ಸುದ್ದಿ ರಾಜ್ಯ 2,280 ಕೋಟಿ ಹೂಡಿಕೆ: 3,457 ಹೊಸ ಉದ್ಯೋಗ ಸೃಷ್ಟಿ

2,280 ಕೋಟಿ ಹೂಡಿಕೆ: 3,457 ಹೊಸ ಉದ್ಯೋಗ ಸೃಷ್ಟಿ

0

ಬೆಂಗಳೂರು: ಕರ್ನಾಟಕಕ್ಕೆ ಮತ್ತೆ 2,280 ಕೋಟಿ ರೂಪಾಯಿ ಹೂಡಿಕೆ ಹರಿದು ಬಂದಿದೆ. 20 ಯೋಜನೆಗಳ ಮುಖಾಂತರ 3,457 ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ತಿಳಿಸಿದ್ದಾರೆ.


ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ರಾಮನಗರ, ಕೋಲಾರ, ಬೆಳಗಾವಿ, ತುಮಕೂರು, ಧಾರವಾಡ, ಕಲಬುರಗಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಲವು ಉದ್ಯಮಗಳು ಸ್ಥಾಪನೆಯಾಗಲಿವೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಕೈಗಾರಿಕೆಗಳನ್ನು ವಿಸ್ತರಿಸಲು ಮತ್ತು ಉದ್ಯೋಗ ಸೃಷ್ಟಿಸಲು ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.

Exit mobile version