Home Advertisement
Home ಸುದ್ದಿ ರಾಜ್ಯ ರಾಜ್ಯದ ಸಫಾರಿಗಳಿಗೆ ಹೊಸ ನಿಯಮ: ಓಪನ್ ಕ್ಯಾಂಪರ್‌ಗೆ ನಿಷೇಧ

ರಾಜ್ಯದ ಸಫಾರಿಗಳಿಗೆ ಹೊಸ ನಿಯಮ: ಓಪನ್ ಕ್ಯಾಂಪರ್‌ಗೆ ನಿಷೇಧ

0
61

ಬೆಂಗಳೂರು: ದುಬಾರೆ ಆನೆ ಶಿಬಿರದಲ್ಲಿ ನಡೆದ ದುರ್ಘಟನೆ ಹಿನ್ನೆಲೆ ಸರಕಾರ ಪ್ರವಾಸಿಗರ ಸುರಕ್ಷತೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶ ಹಾಗೂ ವನ್ಯಜೀವಿಧಾಮಗಳ ಸಫಾರಿಯಲ್ಲಿ ತೆರೆದ ವಾಹನಗಳನ್ನು ಬಳಸುವಂತಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಪ್ರವಾಸಿಗರ ಹೆಚ್ಚಿನ ಸುರಕ್ಷಿತೆಗಾಗಿ ಸಫಾರಿಯಲ್ಲಿ ಇನ್ನು ಮುಂದೆ ತೆರೆದ ಕ್ಯಾಂಪರ್‌ಗಳ ಬದಲು ಸುರಕ್ಷಿತ ಬಸ್‌ಗಳನ್ನು ಬಳಸುವಂತೆ ಸಚಿವರು ಸೂಚನೆ ನೀಡಿದ್ದಾರೆ.

ಬಂಡೀಪುರ, ನಾಗರಹೊಳೆ, ಬಿಳಿಗಿರಿರಂಗನಬೆಟ್ಟ, ಕಾಳಿ ಹಾಗೂ ಭದ್ರಾ ಹುಲಿ ಸಂರಕ್ಷಿತ ಪ್ರದೇಶ, ಮಲೆ ಮಹದೇಶ್ವರ ಬೆಟ್ಟ, ದಾಂಡೇಲಿ ಸೇರಿದಂತೆ ರಾಜ್ಯದ ವಿವಿಧ ವನ್ಯಜೀವಿಧಾಮಗಳಲ್ಲಿ ಸಫಾರಿ ನಡೆಯುತ್ತಿದ್ದು, ಯಾವುದೇ ದುರ್ಘಟನೆ ಸಂಭವಿಸಿಲ್ಲ ಆದರೆ ಅದಕ್ಕೂ ಮೊದಲೇ ಎಚ್ಚೆತ್ತುಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.