ರವಿ ಹಂಜ್‌ಗೆ ಪೊಲೀಸರ ನೋಟಿಸ್: ನ. 26ರೊಳಗೆ ವಿಚಾರಣೆಗೆ ಹಾಜರಾಗಲು ಸೂಚನೆ

ಬೆಳಗಾವಿ: ಬಸವಣ್ಣನವರ ಕುರಿತು ಅವಹೇಳನಕಾರಿ ಬರಹ ಪ್ರಕಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಲೇಖಕ ರವಿ ಹಂಜ್‌ಗೆ ಬೆಳಗಾವಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ನವೆಂಬರ್ 26ರೊಳಗೆ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಗೆ ಖುದ್ದಾಗಿ ಹಾಜರಾಗಿ ವಿಚಾರಣೆ ಎದುರಿಸುವಂತೆ ಸೂಚಿಸಲಾಗಿದೆ. ಬಸವಣ್ಣನವರ ಕುರಿತ ಬರಹವಿರುವ ಪುಸ್ತಕದ ವಿಚಾರವಾಗಿ ಇತ್ತೀಚೆಗೆ ಭಾರೀ ವಿವಾದ ಸೃಷ್ಟಿಯಾಗಿತ್ತು. ಈ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ರವಿ ಹಂಜ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಗೊಳಿಸಿದ್ದರು. ಇದರ ಬೆನ್ನಲ್ಲೇ ಶನಿವಾರ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಅವರನ್ನು ವಶಕ್ಕೆ … Continue reading ರವಿ ಹಂಜ್‌ಗೆ ಪೊಲೀಸರ ನೋಟಿಸ್: ನ. 26ರೊಳಗೆ ವಿಚಾರಣೆಗೆ ಹಾಜರಾಗಲು ಸೂಚನೆ