Home Advertisement
Home ಸುದ್ದಿ ರಾಜ್ಯ ಜೀವ ಬೆದರಿಕೆ: ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ಕೇರಳದಲ್ಲಿ ಅರೆಸ್ಟ್

ಜೀವ ಬೆದರಿಕೆ: ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ಕೇರಳದಲ್ಲಿ ಅರೆಸ್ಟ್

0
21

ಮಂಗಳೂರಿನಿಂದ ರೈಲಿನಲ್ಲಿ ಪರಾರಿ, ಚಿಕ್ಕಬಳ್ಳಾಪುರ ಪೊಲೀಸರ ಕಾರ್ಯಾಚರಣೆಗೆ ಯಶಸ್ಸು

ಮಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆಗೆ ಜೀವ ಬೆದರಿಕೆ ಹಾಕಿ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ಕೊನೆಗೂ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ. ಪೌರಾಯುಕ್ತೆಗೆ ಧಮ್ಕಿ ಹಾಕಿದ ಬಳಿಕ ಎಸ್ಕೇಪ್ ಆಗಿದ್ದ ಆರೋಪಿ ರಾಜೀವ್ ಗೌಡನನ್ನು ಕೇರಳದಲ್ಲಿ ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ರಾಜೀವ್ ಗೌಡ ನಿನ್ನೆ ಮಂಗಳೂರಿನಿಂದ ರೈಲಿನಲ್ಲಿ ಕೇರಳಕ್ಕೆ ಪರಾರಿಯಾಗಿದ್ದ. ಈ ಕುರಿತು ಖಚಿತ ಮಾಹಿತಿ ಪಡೆದ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ, ಕೇರಳದಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:  ವಿಜಯಪುರ ಜಿಲ್ಲೆಯಲ್ಲಿ ಹಾಡು ಹಗಲೇ ಬಂಗಾರದ ಅಂಗಡಿ ದರೋಡೆ

ಶಿಡ್ಲಘಟ್ಟ ಪೌರಾಯುಕ್ತೆಗೆ ಜೀವ ಬೆದರಿಕೆ ಹಾಕಿರುವ ಪ್ರಕರಣ ಗಂಭೀರ ಸ್ವರೂಪ ಪಡೆದಿದ್ದರಿಂದ, ಆರೋಪಿಯ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು. ಆರೋಪಿಯ ಚಲನವಲನ, ಮೊಬೈಲ್ ಸಿಗ್ನಲ್ ಹಾಗೂ ರೈಲು ಪ್ರಯಾಣದ ಮಾಹಿತಿ ಆಧರಿಸಿ ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದರು.

ಬಂಧನದ ಬಳಿಕ ರಾಜೀವ್ ಗೌಡನನ್ನು ಮುಂದಿನ ತನಿಖೆಗಾಗಿ ಚಿಕ್ಕಬಳ್ಳಾಪುರಕ್ಕೆ ಕರೆತರಲಾಗುತ್ತಿದ್ದು, ಬೆದರಿಕೆ ಪ್ರಕರಣದ ಹಿನ್ನೆಲೆ, ಉದ್ದೇಶ ಹಾಗೂ ಇನ್ನಿತರರು ಭಾಗಿಯಾಗಿದ್ದಾರೆಯೇ ಎಂಬ ಕುರಿತು ಪೊಲೀಸರು ವಿಚಾರಣೆ ನಡೆಸಲಿದ್ದಾರೆ.

ಇದನ್ನೂ ಓದಿ:  400 ಕೋಟಿ ಪ್ರಕರಣ ಕೇಂದ್ರ ಸರ್ಕಾರದಿಂದಲೇ ತನಿಖೆ ಆಗಲಿ

ಸರ್ಕಾರಿ ಅಧಿಕಾರಿಗೆ ಜೀವ ಬೆದರಿಕೆ ಹಾಕಿರುವ ಘಟನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ.

Previous articleವಿಜಯಪುರ ಜಿಲ್ಲೆಯಲ್ಲಿ ಹಾಡು ಹಗಲೇ ಬಂಗಾರದ ಅಂಗಡಿ ದರೋಡೆ