ಉಸಿರಾಟದ ಸಮಸ್ಯೆ: ಡಿಸಿಎಂ ಜಿ. ಪರಮೇಶ್ವರ ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಜ್ಯದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಪರಮೇಶ್ವರ ಅವರಿಗೆ ಏಕಾಏಕಿ ಅಸ್ವಸ್ಥತೆ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ಉಸಿರಾಟದ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಕ್ರೀಡಾ ಖಾತೆಯ ಜವಾಬ್ದಾರಿಯನ್ನೂ ಹೊಂದಿರುವ ಪರಮೇಶ್ವರ ಅವರು … Continue reading ಉಸಿರಾಟದ ಸಮಸ್ಯೆ: ಡಿಸಿಎಂ ಜಿ. ಪರಮೇಶ್ವರ ಆಸ್ಪತ್ರೆಗೆ ದಾಖಲು