Home ಸುದ್ದಿ ರಾಜ್ಯ ತೀವ್ರ ಹೊಟ್ಟೆನೋವು; ಸರ್ಕ್ಯೂಟ್ ಹೌಸ್‌ನಲ್ಲಿ ವಿಶ್ರಾಂತಿ ಪಡೆದ ಸಿಎಂ

ತೀವ್ರ ಹೊಟ್ಟೆನೋವು; ಸರ್ಕ್ಯೂಟ್ ಹೌಸ್‌ನಲ್ಲಿ ವಿಶ್ರಾಂತಿ ಪಡೆದ ಸಿಎಂ

0
38

ಬೆಳಗಾವಿ: ಅಧಿವೇಶನ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ.

ಬೆಳಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರು ಹಾಗೂ ಸಚಿವರ ಜತೆ ಬೆಳಗಾವಿಯಲ್ಲಿ ಧರಣಿ ಪ್ರತಿಭಟನೆ ನಡೆಸಿದ ಸಿಎಂ ಸಿದ್ದರಾಮಯ್ಯ, ನಂತರ ಬೆಳಗಿನ ಅವಧಿಯ ಅಧಿವೇಶನಕ್ಕೆ ಹಾಜರಾಗಿದ್ದರು. ಮಧ್ಯಾಹ್ನದ ಬಳಿಕ ಸಿದ್ದರಾಮಯ್ಯ ಅವರಿಗೆ ದಿಢೀರ್ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಕಲಾಪಕ್ಕೆ ಹಾಜರಾಗಲಿಲ್ಲ.

ವೈದ್ಯರ ಸಲಹೆಯಂತೆ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿಯೇ ಮುಖ್ಯಮಂತ್ರಿಗಳು ವಿಶ್ರಾಂತಿ ತೆಗೆದುಕೊಂಡರು. ಈ ವೇಳೆ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಸಚಿವ ಬೈರತಿ ಸುರೇಶ್ ಇತರರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ ಮುಖ್ಯಮಂತ್ರಿಗಳ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.