SK Home Ad
Home ಸುದ್ದಿ ರಾಜ್ಯ ಡಿ.ಕೆ. ಶಿವಕುಮಾರ್‌ ಅವರಿಗೆ ಶುಭ ಕೋರಿದ ಸೋನಿಯಾ ಗಾಂಧಿ

ಡಿ.ಕೆ. ಶಿವಕುಮಾರ್‌ ಅವರಿಗೆ ಶುಭ ಕೋರಿದ ಸೋನಿಯಾ ಗಾಂಧಿ

0
226

ನವದೆಹಲಿ: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್‌ ಅವರಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಶುಭಾಶಯಗಳನ್ನು ತಿಳಿಸಿದ್ದಾರೆ.

ಡಿ.ಕೆ. ಶಿವಕುಮಾರ್‌ ಅವರಿಗೆ ಫೋನ್‌ ಕರೆ ಮಾಡಿರುವ ಸೋನಿಯಾ ಗಾಂಧಿ ಅವರು, ಶುಭಾಶಯಗಳನ್ನು ತಿಳಿಸಿ ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಿರಿ ಎನ್ನುವ ಸಲಹೆಯನ್ನು ನೀಡಿದ್ದಾರೆ.

ಕರ್ನಾಟಕವನ್ನು ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ವಿಶ್ವಾಸ ನನಗಿದೆ. ಹೊಸ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಿ. ಮತ್ತಷ್ಟು ಯಶಸ್ಸು ನಿಮ್ಮದಾಗಲಿ ಎಂದು ಸೋನಿಯಾ ಗಾಂಧಿ ಅವರು ಶುಭ ಕೋರಿದ್ದಾರೆ.

ಬುಧವಾರ (ಇಂದು) ಸಂಜೆ 4.05ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮತ್ತು ಡಿಸಿಎಂ ಆಗಿ ಜಿ. ಪರಮೇಶ್ವರ್‌ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಅವರೊಂದಿಗೆ 12 ಶಾಸಕರುಗಳು ಕೂಡ ಪ್ರತಿಜ್ಞಾವಿಧಿ ಸ್ವೀಕರಿಲಿದ್ದಾರೆ.