ಬೆಂಗಳೂರು: ರಾಜ್ಯದಾದ್ಯಂತ ಇರುವ ಎಲ್ಲಾ ಉಪ ನೋಂದಣಿ ಕಚೇರಿಗಳು ಜುಲೈ 12ರ ಭಾನುವಾರದಂದು ರಜಾ ದಿನವಾಗಿದ್ದರೂ ಸಹ, ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಇಲಾಖೆಯ ಕಾರ್ಯದೊತ್ತಡ ನಿವಾರಣೆಗಾಗಿ ಎಂದಿನಂತೆ ತೆರೆದಿದ್ದು, ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ.
ಈ ದಿನದಂದು ಸಾರ್ವಜನಿಕರು ಎಂದಿನಂತೆ ಆಸ್ತಿ ನೋಂದಣಿ, ಮುದ್ರಾಂಕ ಖರೀದಿ ಹಾಗೂ ಇಲಾಖೆಗೆ ಸಂಬಂಧಿಸಿದ ಇತರ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದೆ.
ಸಾರ್ವಜನಿಕರು ಈ ವಿಶೇಷ ಅವಕಾಶದ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.






















