ಭಾನುವಾರವೂ ಆಗುತ್ತೆ ಕೆಲಸ! ಸಬ್ ರಿಜಿಸ್ಟ್ರಾರ್ ಕಚೇರಿಗಳು ಓಪನ್
ಬೆಂಗಳೂರು: ರಾಜ್ಯದಾದ್ಯಂತ ಇರುವ ಎಲ್ಲಾ ಉಪ ನೋಂದಣಿ ಕಚೇರಿಗಳು ಜುಲೈ 12ರ ಭಾನುವಾರದಂದು ರಜಾ ದಿನವಾಗಿದ್ದರೂ ಸಹ, ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಇಲಾಖೆಯ ಕಾರ್ಯದೊತ್ತಡ ನಿವಾರಣೆಗಾಗಿ ಎಂದಿನಂತೆ ತೆರೆದಿದ್ದು, ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ. ಈ ದಿನದಂದು ಸಾರ್ವಜನಿಕರು ಎಂದಿನಂತೆ ಆಸ್ತಿ ನೋಂದಣಿ, ಮುದ್ರಾಂಕ ಖರೀದಿ ಹಾಗೂ ಇಲಾಖೆಗೆ ಸಂಬಂಧಿಸಿದ ಇತರ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದೆ. ಸಾರ್ವಜನಿಕರು ಈ ವಿಶೇಷ ಅವಕಾಶದ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
Copy and paste this URL into your WordPress site to embed
Copy and paste this code into your site to embed