ಯತ್ನಾಳ್‌–ವಿಜಯೇಂದ್ರ ದಿಢೀರ್‌ ಭೇಟಿ; ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ!

ಹುಬ್ಬಳ್ಳಿ: ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭಾನುವಾರ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಅನಿರೀಕ್ಷಿತವಾಗಿ ಮುಖಾಮುಖಿಯಾದರು. ಇಬ್ಬರೂ ನಾಯಕರು ಪರಸ್ಪರ ಸೌಜನ್ಯದಿಂದ ಮಾತನಾಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಛಬ್ಬಿ ಗ್ರಾಮದ ಖಾಸಗಿ ಮನೆಯೊಂದರಲ್ಲಿ ಈ ಭೇಟಿ ನಡೆದಿದೆ. ಗ್ರಾಮದಲ್ಲಿ ಚಾತುರ್ಮಾಸದ ಅಂಗವಾಗಿ ಆಯೋಜಿಸಿದ್ದ ಕ್ಷಮಾವಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಯತ್ನಾಳ್‌ ಅವರು ಖಾಸಗಿ ಮನೆಯೊಂದರಲ್ಲಿ ಉಪಾಹಾರ ಸೇವಿಸುತ್ತಿದ್ದರು. ಇದೇ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ವಿಜಯೇಂದ್ರ … Continue reading ಯತ್ನಾಳ್‌–ವಿಜಯೇಂದ್ರ ದಿಢೀರ್‌ ಭೇಟಿ; ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ!