ಉದ್ಯಾನವನ ತಿದ್ದುಪಡಿ ವಿಧೇಯಕ ವಿಚಾರದಲ್ಲಿ ಯೂಟರ್ನ್‌: ಸರ್ಕಾರದಿಂದ ಮಹತ್ವದ ತೀರ್ಮಾನ

ಬೆಂಗಳೂರು: ತೀವ್ರ ಸಾರ್ವಜನಿಕ ವಿರೋಧಕ್ಕೆ ಮಣಿದ ರಾಜ್ಯ ಸರ್ಕಾರ, ವಿವಾದಕ್ಕೆ ಕಾರಣವಾಗಿದ್ದ ‘ಕರ್ನಾಟಕ ಉದ್ಯಾನವನಗಳ (ಸಂರಕ್ಷಣೆ) ತಿದ್ದುಪಡಿ ವಿಧೇಯಕ’ವನ್ನು ವಾಪಸ್ ಪಡೆಯಲು ನಿರ್ಧರಿಸಿದೆ. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಉದ್ಯಾನವನಗಳ ಜಾಗವನ್ನು ಇತರೆ ಉದ್ದೇಶಗಳಿಗೆ ಬಳಸಿಕೊಳ್ಳಲು ಅವಕಾಶ ಕಲ್ಪಿಸುವ ಅಂಶಗಳುಳ್ಳ ತಿದ್ದುಪಡಿ ವಿಧೇಯಕಕ್ಕೆ ಸಾರ್ವಜನಿಕರು ಹಾಗೂ ಪರಿಸರ ಹೋರಾಟಗಾರರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಹಸಿರು ಪ್ರದೇಶಗಳ ಸಂರಕ್ಷಣೆಗೆ ಧಕ್ಕೆಯಾಗಲಿದೆ ಎಂಬ ಆತಂಕವೂ ವ್ಯಾಪಕವಾಗಿ ವ್ಯಕ್ತವಾಗಿತ್ತು. ಶೇ. 5ರಷ್ಟು ಉದ್ಯಾನವನದ … Continue reading ಉದ್ಯಾನವನ ತಿದ್ದುಪಡಿ ವಿಧೇಯಕ ವಿಚಾರದಲ್ಲಿ ಯೂಟರ್ನ್‌: ಸರ್ಕಾರದಿಂದ ಮಹತ್ವದ ತೀರ್ಮಾನ