Home ಸುದ್ದಿ ರಾಜ್ಯ ‘ನೀರಿದ್ದರೆ ನಾಳೆ’ ಅಭಿಯಾನಕ್ಕೆ ರಾಯಭಾರಿಯಾಗಿ ನಟ ವಸಿಷ್ಠ ಸಿಂಹ

‘ನೀರಿದ್ದರೆ ನಾಳೆ’ ಅಭಿಯಾನಕ್ಕೆ ರಾಯಭಾರಿಯಾಗಿ ನಟ ವಸಿಷ್ಠ ಸಿಂಹ

0

ಅಕ್ಟೋಬರ್ 9ರಂದು ಸಿಎಂ – ಡಿಸಿಎಂ ಅವರಿಂದ ‘ನೀರಿದ್ದರೆ ನಾಳೆ’ ಯೋಜನೆಗೆ ಚಾಲನೆ

ಬೆಂಗಳೂರು: ‘ನೀರಿದ್ದರೆ ನಾಳೆ’ ಎಂಬ ಮಹತ್ವಾಕಾಂಕ್ಷಿ ಯೋಜನೆಗೆ ಕನ್ನಡ ಚಿತ್ರರಂಗದ ಖ್ಯಾತ ನಟ ವಸಿಷ್ಠ ಸಿಂಹ ರಾಯಭಾರಿಯಗಿದ್ದಾರೆ ಎಂದು ಸಚಿವ ಎನ್.ಎಸ್.ಬೋಸರಾಜು ತಿಳಿಸಿದ್ದಾರೆ.

ಇಂದು ಸಮುದಾಯ ಸಹಭಾಗಿತ್ವದೊಂದಿಗೆ ಅಂತರ್ಜಲ ಅಭಿವೃದ್ಧಿ ಹಾಗೂ ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ನಮ್ಮ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯು ನೀರಿದ್ದರೆ ನಾಳೆ ಎನ್ನುವ ವಿಶಿಷ್ಠವಾದ ಅಭಿಯಾನ ಆರಂಭಿಸುವ ಕುರಿತಂತೆ ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು

💧‘ನೀರಿದ್ದರೆ ನಾಳೆ’ ಯೋಜನೆಯ ಮೊದಲ ಹಂತದಲ್ಲಿ ರಾಜ್ಯದ 16 ಜಿಲ್ಲೆಗಳ 27 ತಾಲ್ಲೂಕಗಳಲ್ಲಿ ಅಂತರ್ಜಲವನ್ನು ಅತಿಯಾಗಿ ಬಳಕೆ ಮಾಡುತ್ತಿರುವ 525 ಗ್ರಾಮ ಪಂಚಾಯಿತಿಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುವುದು. ಇದರಲ್ಲಿ ನಮ್ಮ ಕಲ್ಯಾಣ ಕರ್ನಾಟಕ ಭಾಗದ 100ಕ್ಕೂ ಹೆಚ್ಚು ಅಂತರ್ಜಲ ಅತಿಯಾಗಿ ಬಳಸುತ್ತಿರುವ ಗ್ರಾಮ ಪಂಚಾಯಿತಿಗಳೂ ಸೇರಿವೆ.

💧ಈ ಮಹತ್ವಾಕಾಂಕ್ಷಿ ಯೋಜನೆಗೆ ಕನ್ನಡ ಚಿತ್ರರಂಗದ ಖ್ಯಾತ ನಟರಾದ ಶ್ರೀ ವಸಿಷ್ಠ ಸಿಂಹ ಅವರನ್ನು ರಾಯಭಾರಿಯನ್ನಾಗಿ ನೇಮಿಸಲಾಗಿದ್ದು, ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ನಾಳೆ ಅಂದರೆ ಅಕ್ಟೋಬರ್ 9ರಂದು, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ ನ ನಡೆಯಲಿರುವ ಸಮಾರಂಭದಲ್ಲಿ ಚಾಲನೆ ನೀಡಲಿದ್ದಾರೆ.

💧‘ನೀರಿದ್ದರೆ ನಾಳೆ’ ಯೋಜನೆ ಮೂಲಕ ನೈಸರ್ಗಿಕವಾಗಿ ನಿರ್ಮಾಣಗೊಂಡ ಹಾಗೂ ನಮ್ಮ ಪೂರ್ವಜರು ನಿರ್ಮಿಸಿರುವ ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಸಮೃದ್ಧ ಕರ್ನಾಟಕಕ್ಕೆ ಭದ್ರ ಅಡಿಪಾಯ ಹಾಕುವುದು ಮೂಲ ಉದ್ದೇಶ.

💧 ಇದರ ಜೊತೆಗೆ ರಾಜ್ಯದ ಜಲ ಮೂಲಗಳ ಸಂರಕ್ಷಣೆಗಾಗಿ ವಿಶೇಷ ಯೋಜನೆ ರೂಪಿಸುವುದು. ನಾಗರಿಕರನ್ನು ಈ ಅಭಿಯಾನದ ಪಾಲುದಾರರನ್ನಾಗಿ ಮಾಡುವ ಉದ್ದೇಶವನ್ನೂ ಹೊಂದಿದೆ.

ಪತ್ರಿಕಾಗೋಷ್ಠಿಯಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ ಕಾರ್ಯದರ್ಶಿ ಬಿ.ಕೆ ಪವಿತ್ರ ಹಾಗೂ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version