SK Home Ad
Home ಸುದ್ದಿ ರಾಜ್ಯ ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್​​ಗೆ ಗೆಲುವು

ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್​​ಗೆ ಗೆಲುವು

0
30

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ 908 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ರಂಗನಾಥ್ 10,810 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ 9,902 ಮತಗಳನ್ನು ಗಳಿಸಿದ್ದಾರೆ.

ಸತತ ಐದು ಬಾರಿ ಗೆದ್ದಿದ್ದ ಪುಟ್ಟಣ್ಣ ಈ ಬಾರಿ ಸೋಲು ಕಂಡಿದ್ದು, ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದೆ.

ಕೊನೆಯ ಸುತ್ತಿನ ಮತ ಎಣಿಕೆಯಲ್ಲಿ ಎ.ಪಿ. ರಂಗನಾಥ್, 10810 ಮತಗಳನ್ನು ಪಡೆದರೆ, ಕಾಂಗ್ರೆಸ್ ಪಕ್ಷದ ಪುಟ್ಟಣ್ಣ ಅವರು 9902 ಮತಗಳನ್ನು ಪಡೆದಿದ್ದರು. ಈ ಸುತ್ತಿನಲ್ಲಿ ರಂಗನಾಥ್ ಅವರು 908 ಮತಗಳ ಮುನ್ನಡೆ ಸಾಧಿಸಿದ್ದರು.