Home Advertisement
Home ಸುದ್ದಿ ರಾಜ್ಯ ವಿನಯ್ ಕುಲಕರ್ಣಿ ಅರ್ಜಿ ವಜಾ: ಜಾಮೀನು ನಿರಾಕರಿಸಿದ ಹೈಕೋರ್ಟ್

ವಿನಯ್ ಕುಲಕರ್ಣಿ ಅರ್ಜಿ ವಜಾ: ಜಾಮೀನು ನಿರಾಕರಿಸಿದ ಹೈಕೋರ್ಟ್

0
60

ಬೆಂಗಳೂರು: ಹುಬ್ಬಳ್ಳಿಯ ಬಿಜೆಪಿ ಮುಖಂಡ ಹಾಗೂ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ.

ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ಕುರಿತು ಹೈಕೋರ್ಟ್‌ನಲ್ಲಿ ಸುದೀರ್ಘ ವಾದ-ವಿಚಾರಣೆ ನಡೆದಿದ್ದು, ಜ.9ರಂದು ತೀರ್ಪು ಕಾಯ್ದಿರಿಸಲಾಗಿತ್ತು. ಮಂಗಳವಾರ (ಜ.27) ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರನ್ನೊಳಗೊಂಡ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

ಇದನ್ನೂ ಓದಿ:  ಗ್ರಾಮ ಪಂಚಾಯಿತಿಗಳಿಗೆ ಗಾಂಧೀಜಿ ಹೆಸರು: ಸರ್ಕಾರದ ನಿರ್ಧಾರ

ಜಾಮೀನು ತಿರಸ್ಕಾರಕ್ಕೆ ಕಾರಣವೇನು?: ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ 2021ರ ಆಗಸ್ಟ್ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ, ಸಾಕ್ಷಿಗಳಿಗೆ ಬೆದರಿಕೆ ಹಾಕಲಾಗಿದೆ, ಜಾಮೀನು ಷರತ್ತುಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪಗಳನ್ನು ಮುಂದಿಟ್ಟು ಸಿಬಿಐ ಜಾಮೀನು ರದ್ದುಪಡಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿತ್ತು.

ಅದರಂತೆ, 2025ರ ಜೂನ್ ತಿಂಗಳಲ್ಲಿ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿ ಅವರ ಜಾಮೀನನ್ನು ರದ್ದುಪಡಿಸಿ, ಜೈಲಿಗೆ ಶರಣಾಗುವಂತೆ ಆದೇಶಿಸಿತ್ತು. ಆದೇಶದ ಅನುಸಾರವಾಗಿ ಅವರು ಜೈಲಿಗೆ ಶರಣಾಗಿದ್ದು, ಕಳೆದ 7 ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂ ಓದಿ:  ಹಿರಿಯರ ಬದುಕಿಗೆ ‘ಸ್ಪಂದನ’: ಅರಿವು ಕೇಂದ್ರದಿಂದ ಜೀವನೋತ್ಸಾಹ

ಈ ಹಿನ್ನೆಲೆಯಲ್ಲಿ ಮತ್ತೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇದೀಗ ತಿರಸ್ಕರಿಸಿದ್ದು, ವಿನಯ್ ಕುಲಕರ್ಣಿಗೆ ಜೈಲೇ ಗತಿಯಾಗಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣ ಹಿನ್ನೆಲೆ: 2016 ರ ಜೂನ್ 15 ರಂದು ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದ ಯೋಗೀಶ ಗೌಡನನ್ನು ಅವರದ್ದೇ ಮಾಲೀಕತ್ವದ ಜಿಮ್ ನಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ರಾಜಕೀಯ ಪ್ರೇರಿತ ಹತ್ಯೆ ಆರೋಪಗಳು ಕೇಳಿಬಂದಿದ್ದು, ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು.

ಇದನ್ನೂ ಓದಿ:  ʼಜನ ನಾಯಗನ್ʼ ಚಿತ್ರಕ್ಕೆ ಹಿನ್ನಡೆ : ಸದ್ಯಕ್ಕಿಲ್ಲ ಬಿಡುಗಡೆಯ ಗ್ಯಾರೆಂಟಿ

ಸಿಬಿಐ ಬಂಧನ: ದೀರ್ಘ ತನಿಖೆಯ ನಂತರ,2020ರ ನವೆಂಬರ್ 5ರಂದು ಸಿಬಿಐ, ಈ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಎಂದು ಆರೋಪಿಸಿ ಬಂಧಿಸಿತು.

Previous articleರಸಗೊಬ್ಬರ ಅಂಗಡಿಯಲ್ಲಿ ಬೆಂಕಿ ಅವಘಡ: ಅಪಾರ ಹಾನಿ
Next articleಕಾಂಗ್ರೆಸ್‌ ಬಣ್ಣ ಬಯಲು ಮಾಡಲು ಬಿಜೆಪಿಯಿಂದ ನಿರಂತರ ಹೋರಾಟ