ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

0
40

ಶಿವಮೊಗ್ಗ: ಮಧ್ಯಾಹ್ನ ಸಹೋದರ ಫೋನ್ ಮಾಡಿ ವಿಷಯ ತಿಳಿಸಿದ್ದು ಪ್ರತಾಪ್ ಕಾಣೆಯಾದ ವಿಚಾರವಾಗಿ ದಾವಣಗೆರೆ, ಶಿವಮೊಗ್ಗ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಹೊನ್ನಾಳಿಯಲ್ಲಿ ಜೋಳಕ್ಕೆ ಬಳಸುವ ವಿಷ ಕುಡಿದಿರುವ ವಿಷಯ ತಿಳಿಯಿತು, ದಾವಣಗೆರೆಗೆ ಶಿಫ್ಟ್ ಮಾಡೋಕೆ ಹೇಳಿದ್ದೆವು. ಶಿವಮೊಗ್ಗ ಹತ್ತಿರ ಎಂದು ಇಲ್ಲಿಗೆ ಶಿಫ್ಟ್ ಮಾಡಿದ್ದಾರೆ ಎಂದು ತಿಳಿಸಿದರು. ಮದುವೆಯಾಗಿ 16 ವರ್ಷ ಆದರು ಮಕ್ಕಳಾಗಿಲ್ಲ ಎಂಬ ಕೊರಗಿತ್ತು. ಡಿಅಡಿಕ್ಷನ್ ಸೆಂಟರ್‌ನಲ್ಲಿ ಎರಡು ತಿಂಗಳು ಪ್ರತಾಪ ಇದ್ದರು. ಅಲ್ಲಿ ಸರಿ ಹೋಗಿದ್ದರಿಂದ ನನ್ನ ರಾಜಕೀಯ ಸೇರಿ ನಮ್ಮ ವ್ಯವಹಾರಗಳನ್ನೆಲ್ಲ ಅವರೆ ನೋಡಿಕೊಳ್ಳುತ್ತಿದ್ದರು. ಮಂಗಳವಾರ ಚನ್ನಗಿರಿ ತಾಲೂಕಿನ ಕತ್ತಲಗೆರೆಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿಸಿದರು.

Previous articleಶಾಲೆಯ ಹೊಸ ಕೊಠಡಿಯ ಮೇಲ್ಛಾವಣಿ ಕುಸಿತ: ವಿದ್ಯಾರ್ಥಿಗೆ ಗಂಭೀರ ಗಾಯ
Next articleವಸತಿ ಶಾಲೆ ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ: ಇಬ್ಬರ ಅಮಾನತು