SK Home Ad
Home ಸುದ್ದಿ ರಾಜ್ಯ ₹3.3 ಕೋಟಿ ನಗದು, ₹15 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ಪತ್ತೆ

₹3.3 ಕೋಟಿ ನಗದು, ₹15 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ಪತ್ತೆ

0
2

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಗೋಕಾಕ ಮತ್ತು ಬೆಂಗಳೂರಿನ ಡಾಲರ್ಸ್ ಕಾಲನಿಯ ನಿವಾಸಗಳು, ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಸಚಿವರ ಸರ್ಕಾರಿ ಬಂಗಲೆ ಸೇರಿದಂತೆ ಹಲವು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ₹3.3 ಕೋಟಿ ನಗದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಶೋಧದ ವೇಳೆ ಅಮೆರಿಕನ್ ಡಾಲರ್, ಯುರೋ ಸೇರಿದಂತೆ ಸುಮಾರು ₹15 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಯೂ ಪತ್ತೆಯಾಗಿದೆ ಎನ್ನಲಾಗಿದೆ.

ಇದಲ್ಲದೆ, ಕಾಂಗೋದಲ್ಲಿರುವ ಸಂಸ್ಥೆಯೊಂದರಲ್ಲಿ ಅಧಿಕೃತ ಬ್ಯಾಂಕಿಂಗ್ ಮಾರ್ಗವನ್ನು ಹೊರತುಪಡಿಸಿ ದೊಡ್ಡ ಮೊತ್ತದ ಹಣವನ್ನು ಹೂಡಿಕೆ ಮಾಡಿರುವ ಅಥವಾ ವೆಚ್ಚ ಮಾಡಿರುವ ಸಾಧ್ಯತೆಯ ಬಗ್ಗೆಯೂ ತನಿಖಾ ಸಂಸ್ಥೆಗೆ ಕೆಲವು ದಾಖಲೆಗಳು ಹಾಗೂ ಸಾಕ್ಷ್ಯಗಳು ಲಭ್ಯವಾಗಿವೆ ಎಂದು ಮೂಲಗಳು ತಿಳಿಸಿವೆ.

ಈ ಹಣದ ಮೂಲ, ವಿದೇಶಿ ಕರೆನ್ಸಿಯ ಸ್ವರೂಪ ಹಾಗೂ ಕಾಂಗೋದಲ್ಲಿನ ಹಣಕಾಸು ವಹಿವಾಟಿನ ಕುರಿತು ಇ.ಡಿ. ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಶೋಧ ಕಾರ್ಯಾಚರಣೆಯಲ್ಲಿ ಪತ್ತೆಯಾದ ದಾಖಲೆಗಳು ಮತ್ತು ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.