KRS ‘ಕಾವೇರಿ ಆರತಿ’ಗೆ ಶೀಘ್ರದಲ್ಲಿ ನೀಲನಕ್ಷೆ

ಮಂಡ್ಯ: ಗಂಗಾ ಆರತಿ ರೀತಿ ಮಾದರಿಯಲ್ಲೇ ಕಾವೇರಿ ಆರತಿ ಕಾರ್ಯಕ್ರಮ ಆರಂಭಿಸಲು ರಾಜ್ಯ ಸಚಿವ ಸಂಪುಟ ನಿನ್ನೆಯಷ್ಟೇ 92 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು, ಇಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು KRS ಗೆ ಭೇಟಿ ನೀಡಿ ನೀರಿನ ಸಂಗ್ರಹದ ಮಾಹಿತಿ ಪಡೆದುಕೊಂಡರು. ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸುವ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಸ್ಥಳ ಪರಿಶೀಲಿಸಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿದರು.
ಈ ವೇಳೆ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಕುಮಾರ್, ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.