KSRTC ಬಸ್ ಪಲ್ಟಿ: 32 ಮಂದಿಗೆ ಗಾಯ

0
16
ಮಂಡ್ಯ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್’ಆರ್’ಟಿಸಿ ಬಸ್ ಉರುಳಿ ಬಿದ್ದು 32 ಮಂದಿ ಪ್ರಯಾಣಿಕರು ಗಾಯಗೊಂಡಿರುವ ದಾರುಣ ಘಟನೆ ಕೆ ಆರ್ ಪೇಟೆ ತಾಲೂಕಿನ ಮುರುಕನಹಳ್ಳಿ ಬಳಿ ಚನ್ನರಾಯಪಟ್ಟಣ- ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಗದಗದಿಂದ ಮೈಸೂರಿಗೆ ಹೋಗುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಬಸ್ ವೇಗದಲ್ಲಿದ್ದರಿಂದ ತಡೆಗೋಡೆ ಮುರಿದಿದೆ. ಬಸ್ ಪಲ್ಟಿಯಾಗಿ ರಸ್ತೆ ಬದಿಯ ಜಮೀನಿಗೆ ಉರುಳಿ ಬಿದ್ದಿದೆ. ಬಸ್‌ನಲ್ಲಿದ್ದ 32 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಓರ್ವ ಪ್ರಯಾಣಿಕನಿಗೆ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೆಆರ್ ಪೇಟೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಕೆಆರ್ ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಕನ್ನಡಕ್ಕೆ ಆಪತ್ತಿಲ್ಲ, ಆಪತ್ತು ತರುವ ಶಕ್ತಿ ಹುಟ್ಟಿಲ್ಲ
Next articleನಿಮ್ಮ ನಿಯತ್ತಿನ ಸೇವಕ: ಬೊಮ್ಮಾಯಿ