ಬೆಂಗಳೂರು: #KUWSDB ನಲ್ಲಿ ಖಾಲಿ ಇದ್ದ 50 ಸಹಾಯಕ ಎಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ನಡೆಸಿದ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ತಾತ್ಕಾಲಿಕ ಅಂಕಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಆಕ್ಷೇಪಣೆ ಸಲ್ಲಿಸಲು ಆ.27 ಕೊನೆ ದಿನ. ಪರೀಕ್ಷೆ ನಡೆದು 12 ದಿನಗಳಲ್ಲಿ ಫಲಿತಾಂಶ ನೀಡಲಾಗಿದೆ ಎಂದಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿದ್ದು KUWSDB, AE (Civil) ಹುದ್ದೆಗಳಿಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಕೀ ಉತ್ತರ ಮತ್ತು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸುವ ಬಗ್ಗೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ, KUWSDB ನಲ್ಲಿ ಖಾಲಿ ಇರುವ ಒಟ್ಟು 50 AE (Civil) ಹುದ್ದೆಗಳಿಗೆ, ದಿನಾಂಕ:10.02.2024 ರಿಂದ ದಿನಾಂಕ:10.03.2024 ರವರೆಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ನಂತರ ದಿನಾಂಕ 11.08.2024 ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ದಿನಾಂಕ 12.08.2024 ರಂದು ಕೀ ಉತ್ತರಗಳನ್ನು ಪ್ರಕಟಿಸಿ ದಿನಾಂಕ:15.08.2024 ರವರೆಗೆ ಆಕ್ಷೇಪಣೆಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿತ್ತು. ಅದರಂತೆ ಪ್ರಾಧಿಕಾರದಲ್ಲಿ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರಿಂದ ಪರಿಶೀಲಿಸಿ ವಿಷಯ ತಜ್ಞರ ಶಿಫಾರಸ್ಸಿನಂತೆ ದಿನಾಂಕ:20.08.2024 ರಂದು ಪರಿಷ್ಕೃತ ಕೀ ಉತ್ತರಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿರುತ್ತದೆ. ಅದರಂತೆ ದಿನಾಂಕ:11.08.2024 ರಂದು ನಡೆದ KUWSDB, AE (Civil) ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಮತ್ತು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ತಾತ್ಕಾಲಿಕ ಅಂಕಪಟ್ಟಿಯನ್ನು ದಿನಾಂಕ 23.08.2024 ರಂದು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಸಂಜೆ 5:30 ಪ್ರಕಟಿತ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ:27.08.2024 ಗಂಟೆಯೊಳಗೆ ಪೂರಕ ದಾಖಲೆಗಳೊಂದಿಗೆ ಕೆಇಎ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಆಕ್ಷೇಪಣೆ ಲಿಂಕ್‌ನಲ್ಲಿ ಮಾತ್ರ ಸಲ್ಲಿಸುವುದು. ಅಂಚೆ/ಪತ್ರದ ಮೂಲಕ ಅಥವಾ ಇ-ಮೇಲ್ ಮೂಲಕ ಸಲ್ಲಿಸುವ ಅಥವಾ ಪೂರಕ ದಾಖಲೆಗಳಿಲ್ಲದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದಿದ್ದಾರೆ.