‘ಹಳೆಯದನ್ನು ಮರಿಬೇಡ’ ಎನ್ನುತ್ತಿದೆಯೇ AI? ರೆಟ್ರೋ ಲುಕ್ನಲ್ಲಿ ಅರಳಿದ ನೆನಪುಗಳು : : ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ರೂಪದಲ್ಲಿ ಜನರನ್ನು ಅಚ್ಚರಿಗೊಳಿಸುತ್ತಿದೆ. ಕೆಲವೊಮ್ಮೆ ತನ್ನ ಕಾರ್ಯವೈಖರಿಯಿಂದ ಬೇಸರ ಮೂಡಿಸುವ ಇದೇ AI, ಇದೀಗ ತನ್ನ ಮತ್ತೊಂದು ಮೋಡಿಯ ಮೂಲಕ ನೆಟ್ಟಿಗರ ಮುಖದಲ್ಲಿ ಕಿರುನಗೆ ಮೂಡಿಸುತ್ತಿದೆ. ಕಾರಣ, ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿರುವ 80ರ ದಶಕದ ರೆಟ್ರೋ ಲುಕ್ ಟ್ರೆಂಡ್. ಆಧುನಿಕ ಜೀವನದ ಭರಾಟೆಯಲ್ಲಿ ಕಳೆದುಹೋಗುತ್ತಿರುವ ಸರಳತೆ, ಮುಗ್ಧತೆ, ಆತ್ಮೀಯತೆ ಹಾಗೂ ಸಂಬಂಧಗಳ ನೆನಪುಗಳನ್ನು ಈ ರೆಟ್ರೋ ಚಿತ್ರಗಳು ಮತ್ತೆ ಮುನ್ನೆಲೆಗೆ ತರುತ್ತಿವೆ. ಹಳೆಯ ಫೋಟೋ ಆಲ್ಬಂ ತೆರೆದಾಗ ಮುಖದಲ್ಲಿ ಮೂಡುವ ಸಣ್ಣ ಕಿರುನಗೆಯನ್ನೇ AI ಹೊಸ ರೀತಿಯಲ್ಲಿ ಮರಳಿ ತರುತ್ತಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ವೈಯಕ್ತಿಕ ದ್ವೇಷದಿಂದ ರಾಜಣ್ಣಗೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ತಪ್ಪಿಸಲಾಗಿದೆ: ಜೋಶಿ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವೈಯಕ್ತಿಕ ದ್ವೇಷದಿಂದ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ನೀಡಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು. ಬಳ್ಳಾರಿಯಲ್ಲಿ ಗುರುವಾರ ನಡೆದ ಬಿಜೆಪಿ ‘ಬಳ್ಳಾರಿ ಚಲೋ’ ಪಾದಯಾತ್ರೆ ಸಮಾರೋಪ ಸಮಾವೇಶದಲ್ಲಿ ಮಾತನಾಡಿದ ಅವರು, ‘ಎಸ್ಟಿ ಸಮುದಾಯದ ನಾಯಕ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ರಾಹುಲ್ ಗಾಂಧಿ ಸೂಚಿಸಿದ್ದರಿಂದ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಆಗ ಎಸ್ಟಿ ಸಮುದಾಯದ ಬಗ್ಗೆ ಕಾಳಜಿ ತೋರದ ಕಾಂಗ್ರೆಸ್, ಇದೀಗ ರಾಜಣ್ಣ ಅವರಿಗೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನವನ್ನೂ ನೀಡದೆ ಅನ್ಯಾಯ ಮಾಡಿದೆ’ ಎಂದು ದೂರಿದರು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರಿಗರಿಗೆ ಗುಡ್ನ್ಯೂಸ್ – BMTC 2.0 ಆ್ಯಪ್ ಲೋಕಾರ್ಪಣೆ, ಪ್ರಯಾಣ ಇನ್ನಷ್ಟು ಸ್ಮಾರ್ಟ್ : ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ ‘ನಮ್ಮ ಬಿಎಂಟಿಸಿ ಮೊಬೈಲ್ ಆ್ಯಪ್ 2.0’ ಗುರುವಾರ ವಿಧಾನಸೌಧದಲ್ಲಿ ಬಿಡುಗಡೆಯಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಹಾಗೂ ಸಾರಿಗೆ ಸಚಿವ ಬಿ.ಎಸ್. ಸುರೇಶ್ ಸೇರಿದಂತೆ ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಹೊಸ ಆ್ಯಪ್ನಲ್ಲಿ ಬಿಎಂಟಿಸಿ ಬಸ್ಗಳ ನೈಜ-ಸಮಯದ (Live) ಟ್ರ್ಯಾಕಿಂಗ್, ಪ್ರಯಾಣ ಯೋಜನೆ, ಬಸ್ಗಳ ಆಗಮನದ ಅಂದಾಜು ಸಮಯ, ಡಿಜಿಟಲ್ ಟಿಕೆಟ್ ಮತ್ತು ಪಾವತಿ ವ್ಯವಸ್ಥೆ ಸೇರಿದಂತೆ ಹಲವು ಸೌಲಭ್ಯಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವ ಉದ್ದೇಶ ಹೊಂದಿದೆ. ಬಿಎಂಟಿಸಿಯ ಅಧಿಕೃತ ಆ್ಯಪ್ ಈಗಾಗಲೇ ಪ್ರಯಾಣ ಯೋಜನೆ, ETA ಹಾಗೂ ಬಸ್ ಟ್ರ್ಯಾಕಿಂಗ್ನಂತಹ ಸೌಲಭ್ಯಗಳನ್ನು ಹೊಂದಿದ್ದು, ಹೊಸ ಆವೃತ್ತಿಯಲ್ಲಿ ಅವುಗಳನ್ನು ಮತ್ತಷ್ಟು ಸುಧಾರಿಸಲಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯಪಾಲರನ್ನು ಭೇಟಿಯಾದ ಶ್ರೀ ಅಮರನಾಥೇಶ್ವರ ಮಠದ ಪೀಠಾಧಿಪತಿ : ಕುಷ್ಟಗಿ ತಾಲೂಕಿನ ಮದಲಗಟ್ಟಿ ಗ್ರಾಮದ ಸಮೀಪದಲ್ಲಿರುವ ಶ್ರೀ ಅಮರನಾಥೇಶ್ವರ ಮಹಾದೇವ ಮಠದ ಪೀಠಾಧಿಪತಿ ಶ್ರೀ ಮಹಂತ ಸಹದೇವನಂದ ಗಿರಿ ಮಹಾರಾಜ ಅವರು ಬೆಂಗಳೂರಿನ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಶ್ರೀ ಮಠದ ಅಭಿವೃದ್ಧಿ ಹಾಗೂ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಸಚಿವರ ಕುರ್ಚಿಗಿಂತ ಕಾರ್ಮಿಕರ ಸಾಲೇ ದೊಡ್ಡದು! – ಸಚಿವ ಬಸವಂತಪ್ಪ : ಅಧಿಕಾರದ ಉನ್ನತ ಸ್ಥಾನದಲ್ಲಿದ್ದರೂ ಸಾಮಾನ್ಯರೊಂದಿಗೆ ಬೆರೆತು, ಅವರೊಂದಿಗೆ ಕುಳಿತು ಊಟ ಮಾಡುವ ಸರಳತೆ ರಾಜಕಾರಣದಲ್ಲಿ ಅಪರೂಪ. ಅಂತಹ ಅಪರೂಪದ ಕ್ಷಣಕ್ಕೆ ವಿಧಾನಸೌಧ ಸಾಕ್ಷಿಯಾಯಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಆಯೋಜಿಸಿದ್ದ ‘ದೃಢ ಕರ್ನಾಟಕ ಸಂಕಲ್ಪ’ ಕಾರ್ಯಕ್ರಮದಲ್ಲಿ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಅವರು ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಶ್ರಮಿಕರು, ಯುವಜನರು ಹಾಗೂ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಹಪಂಕ್ತಿ ಭೋಜನ ಸವಿದರು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
2035ಕ್ಕೆ ಸ್ಪೇಸ್ ಸ್ಟೇಷನ್, 2040ಕ್ಕೆ ಚಂದ್ರಯಾನ – ಪ್ಯಾರಿಸ್ ಶೃಂಗಸಭೆಯಲ್ಲಿ ಭಾರತದ ಮಹತ್ವಾಕಾಂಕ್ಷೆ ವಿವರಿಸಿದ ಮೋದಿ : ಭಾರತದ ಬಾಹ್ಯಾಕಾಶ ಕ್ಷೇತ್ರದ ಮುಂದಿನ ಮಹತ್ವಾಕಾಂಕ್ಷೆಯ ಗುರಿಗಳನ್ನು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಜಾಗತಿಕ ವೇದಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಫ್ರಾನ್ಸ್ನ ಪ್ಯಾರಿಸ್ನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಬಾಹ್ಯಾಕಾಶ ಶೃಂಗಸಭೆಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ ಅವರು, 2035ರ ವೇಳೆಗೆ ಭಾರತೀಯ ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸುವುದು ಹಾಗೂ 2040ರ ವೇಳೆಗೆ ಭಾರತೀಯನೊಬ್ಬನನ್ನು ಚಂದ್ರನ ಮೇಲೆ ಇಳಿಸುವುದು ಭಾರತದ ಪ್ರಮುಖ ಗುರಿಗಳಾಗಿವೆ ಎಂದು ಹೇಳಿದರು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮುನ್ನ ಸಾಮಾಜಿಕ ಸಾಮರಸ್ಯದ ಸಂದೇಶ ಸಾರಿದ ವಿಜಯೇಂದ್ರ : ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ಹಮ್ಮಿಕೊಂಡಿರುವ 10 ದಿನಗಳ ‘ಬಳ್ಳಾರಿ ಚಲೋ’ ಪಾದಯಾತ್ರೆಯ ಬೃಹತ್ ಸಮಾರೋಪ ಸಮಾವೇಶಕ್ಕೆ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬಳ್ಳಾರಿ ನಗರದಲ್ಲಿ ವಿವಿಧ ಸಮುದಾಯಗಳ ಮಹನೀಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಸಮಾರೋಪ ಸಮಾವೇಶದ ಹಿನ್ನೆಲೆಯಲ್ಲಿ ಗುರುವಾರ ಬಳ್ಳಾರಿಗೆ ಆಗಮಿಸಿದ ವಿಜಯೇಂದ್ರ ಅವರು ಮೊದಲು ನಗರದ ಆರಾಧ್ಯ ದೈವ ಕನಕ ದುರ್ಗಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಲಿಂಗಾಯತ ಸಮುದಾಯದ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಬೃಹತ್ ಕ್ರೇನ್ ಮೂಲಕ ಹಾರ ಹಾಕಿ ವಿಜಯೇಂದ್ರ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ವಂದೇ ಮಾತರಂ ಎರಡು ಚರಣಗಳ ಆದೇಶಕ್ಕೆ ಬಿಜೆಪಿ ಆಕ್ರೋಶ: ‘ಬಳ್ಳಾರಿ ಚಲೋ’ ಪಾದಯಾತ್ರೆಯ ಬೃಹತ್ ಸಮಾರೋಪ ಸಮಾವೇಶ ನಡೆಯುತ್ತಿರುವ ಬೆನ್ನಲ್ಲೇ ‘ವಂದೇ ಮಾತರಂ’ ಹಾಡಿನ ವಿಚಾರ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಕರ್ನಾಟಕ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ನ ಎರಡು ಚರಣಗಳನ್ನು ಮಾತ್ರ ಹಾಡುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ, ಬಳ್ಳಾರಿಯಲ್ಲಿ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಳ್ತಂಗಡಿ – ಬಾವಿಗೆ ಹಾರಿ ಯುವತಿ ಆತ್ಮಹತ್ಯೆ : ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಿಯಾರು ನಿವಾಸಿ ಯುವತಿಯೊಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 9ರಂದು ಸಂಜೆ ನಡೆದಿದೆ. ಮೃತ ಯುವತಿಯನ್ನು ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡ ಮನೆ ನಿವಾಸಿ ಅಣ್ಣಿ ಗೌಡ ಮತ್ತು ಮಾಲತಿ ದಂಪತಿಯ ಪುತ್ರಿ ಲಿಶ್ಮಿತ ಗೌಡ (20) ಎಂದು ಗುರುತಿಸಲಾಗಿದೆ. ಇವರು ನಡ ಸರ್ಕಾರಿ ಕಾಲೇಜಿನಲ್ಲಿ ಕ್ಲರ್ಕ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಬಳ್ಳಾರಿಯಲ್ಲಿ ಮದ್ಯ ಮಾರಾಟ ಬಂದ್ : ಬಳ್ಳಾರಿ ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವತಿಯಿಂದ ಸೆಪ್ಟೆಂಬರ್ 10ರಂದು ಬೃಹತ್ ಪಾದಯಾತ್ರೆಯ ಬಹಿರಂಗ ಸಮಾರೋಪ ಸಮಾವೇಶ ನಡೆಯುತ್ತಿರುವ ಹಿನ್ನೆಲೆಯಲ್ಲಿ, ನಗರದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮದ್ಯ ಮಾರಾಟ ಮತ್ತು ಸಾಗಣೆಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಬಳ್ಳಾರಿ ನಗರದಾದ್ಯಂತ ಮದ್ಯದಂಗಡಿಗಳು, ಬಾರ್ ಮತ್ತು ರೆಸ್ಟೋರೆಂಟ್ಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು ಆದೇಶ ಹೊರಡಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಡಿ.ಕೆ. ಶಿ ಸರ್ಕಾರದ 100 ದಿನಗಳ ಸಂಭ್ರಮಕ್ಕೆ ವಿಜಯೇಂದ್ರ ಕೌಂಟರ್ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ 100 ದಿನಗಳ ಆಡಳಿತ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಂಭ್ರಮಾಚರಣೆ ನಡೆಯುತ್ತಿರುವ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಜಯೇಂದ್ರ ಅವರು ‘ಸಂಯುಕ್ತ ಕರ್ನಾಟಕ’ ಸುದ್ದಿಯನ್ನು ಹಂಚಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದು, “ಊರಿಗೆ ಬರಗಾಲ, ಮನೆಯಲ್ಲಿ ಸುಗ್ಗಿ” ಎಂಬ ವ್ಯಂಗ್ಯದೊಂದಿಗೆ ಸರ್ಕಾರದ 100 ದಿನಗಳ ಸಂಭ್ರಮವನ್ನು ಪ್ರಶ್ನಿಸಿದ್ದಾರೆ. “ನೂರಾರು ವೈಫಲ್ಯ, ಸಂಕಷ್ಟ, ಸಮಸ್ಯೆಗಳ ನಡುವೆ 2.0 ಕಾಂಗ್ರೆಸ್ ಸರ್ಕಾರದ ನೂರು ದಿನಗಳ ಸಂಭ್ರಮ” ಎಂದು ಟೀಕಿಸಿರುವ ಅವರು, ಕಣ್ಣು ಕುಕ್ಕುವ ಪ್ರಚಾರದ ಮೂಲಕ ಜನರ ಸಮಸ್ಯೆಗಳನ್ನು ಮುಚ್ಚಿಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಡಿಜೆ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ :ಶಬ್ದ ಮಾಲಿನ್ಯ ನಿಯಂತ್ರಣ ಮತ್ತು ನಿಯಮ 2000 ರನ್ವಯ ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿ.ಎನ್.ಎಸ್.ಎಸ್), 2023 ಕಲಂ 163 ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಸಾರ್ವಜನಿಕ ಸುವ್ಯವಸ್ಥೆಯ ಹಿತದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಯಾವುದೇ ಡಿಜೆ ವ್ಯವಸ್ಥೆಗಳು, ಬೇಸ್ ಬೂಸ್ಟರ್ಗಳು, ಮೊಬೈಲ್ ಡಿಜೆ ವಾಹನಗಳು ಹಾಗೂ 75 ಡೆಸಿಬೆಲ್ ಮೀರಿದ ಶಬ್ದ ವೃದ್ಧಿ ಸಾಧನಗಳ ಬಳಕೆಯನ್ನು ಮುಂದಿನ ಆದೇಶದವರೆಗೆ ಸಂಪೂರ್ಣವಾಗಿ ನಿಷೇಧಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಆದೇಶಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಚಿತ್ರದುರ್ಗದ ನೆಲಕ್ಕೆ ಭದ್ರೆಯ ನೀರು – ರೈತರಲ್ಲಿ ಹೊಸ ಭರವಸೆ : ದಶಕಗಳಿಂದ ಭದ್ರಾ ಮೇಲ್ದಂಡೆ ಯೋಜನೆಯ ನೀರಿಗಾಗಿ ಕಾಯುತ್ತಿದ್ದ ಚಿತ್ರದುರ್ಗ ಜಿಲ್ಲೆಯ ರೈತರ ನಿರೀಕ್ಷೆಗೆ ಇದೀಗ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಭದ್ರಾ ಜಲಾಶಯದಿಂದ ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕವಾಗಿ 3 ಟಿಎಂಸಿ ನೀರು ಹರಿಸುವ ಕಾರ್ಯಕ್ಕೆ ಚಾಲನೆ ದೊರೆತಿದ್ದು, ಭದ್ರೆಯ ನೀರು ಚಿತ್ರದುರ್ಗ ಜಿಲ್ಲೆಯತ್ತ ಪ್ರವೇಶಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಶಾಲೆಯೊಳಗಿನ ಚರ್ಚೆ ಪೊಲೀಸ್ ಠಾಣೆಗೆ: ಶಿಕ್ಷಕರ ದಿನಾಚರಣೆ ಆಚರಣೆಯ ವಿಚಾರವಾಗಿ ದಾಂಡೇಲಿಯ ಬಾಂಗೂರನಗರ ಸರ್ಕಾರಿ ಮಾದರಿ ಹಿರಿಯ ಕನ್ನಡ ಶಾಲೆಯಲ್ಲಿ ಎಸ್ಡಿಎಂಸಿ ಹಾಗೂ ಶಿಕ್ಷಕರ ನಡುವೆ ಉಂಟಾದ ಭಿನ್ನಾಭಿಪ್ರಾಯ ಇದೀಗ ಪೊಲೀಸ್ ದೂರು ಮತ್ತು ಇಲಾಖಾ ತನಿಖೆಯ ಹಂತ ತಲುಪಿದೆ. ಸರ್ಕಾರಿ ರಜೆ ಇಲ್ಲದ ಹಿನ್ನೆಲೆಯಲ್ಲಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಶಿಕ್ಷಕರನ್ನು ಸನ್ಮಾನಿಸಲು ಎಸ್ಡಿಎಂಸಿ ನಿರ್ಧರಿಸಿತ್ತು ಎನ್ನಲಾಗಿದೆ. ಆದರೆ ಕೆಲ ಶಿಕ್ಷಕರು ಹಳಿಯಾಳದಲ್ಲಿ ನಡೆಯುವ ಶಿಕ್ಷಕರ ದಿನಾಚರಣೆಗೆ ತೆರಳುವ ಇಂಗಿತ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಚರ್ಚೆ ನಡೆದಿತ್ತು. ಈ ವೇಳೆ ಯೂಟ್ಯೂಬರ್ ಒಬ್ಬರು ಅನುಮತಿಯಿಲ್ಲದೆ ಶಾಲಾ ಆವರಣ ಪ್ರವೇಶಿಸಿ ಚಿತ್ರೀಕರಣ ನಡೆಸಿ ಗದ್ದಲಕ್ಕೆ ಕಾರಣರಾದರೆಂಬುದು ಎಸ್ಡಿಎಂಸಿ ಆರೋಪ. ಮಹಿಳಾ ಉಪಾಧ್ಯಕ್ಷೆಯೊಂದಿಗೆ ಅವಹೇಳನಕಾರಿಯಾಗಿ ವರ್ತಿಸಿರುವುದಾಗಿಯೂ ಪೊಲೀಸ್ ದೂರು ನೀಡಲಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ಕಾಂಗ್ರೆಸ್ಗೆ ಹೊಸ ಜಿಲ್ಲಾ ಸಾರಥಿಗಳು – 35 ಜಿಲ್ಲೆಗಳಿಗೆ ಅಧ್ಯಕ್ಷರ ನೇಮಕ : ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ 100 ದಿನಗಳನ್ನು ಪೂರೈಸಿರುವ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸಂಘಟನೆಯಲ್ಲಿ ಮಹತ್ವದ ಬದಲಾವಣೆ ನಡೆದಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕರ್ನಾಟಕದ 35 ಸಂಘಟನಾ ಜಿಲ್ಲೆಗಳಿಗೆ ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿ ಪಟ್ಟಿಯನ್ನು ಪ್ರಕಟಿಸಿದೆ. ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೈಗೊಂಡಿರುವ ‘ಸಂಘಟನಾ ಸೃಜನ್ ಅಭಿಯಾನ’ದ ಭಾಗವಾಗಿ ಈ ನೇಮಕಾತಿ ಪ್ರಕ್ರಿಯೆ ನಡೆದಿದೆ. ಅಭಿಯಾನದಡಿ ಪ್ರತಿ ಜಿಲ್ಲೆಗೆ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಪಕ್ಷದ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿ ಅಭ್ಯರ್ಥಿಗಳ ಕುರಿತು ವರದಿಗಳನ್ನು ಸಿದ್ಧಪಡಿಸಿದ್ದರು. ಬಳಿಕ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರೊಂದಿಗೆ ಚರ್ಚೆ ನಡೆಸಿ ಅಂತಿಮ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಜನಸೇವೆಯ 100 ದಿನ – ಸಾಮಾಜಿಕ, ಆರ್ಥಿಕ ಸಬಲೀಕರಣಕ್ಕೆ ಡಿಕೆಶಿ ಸಂಕಲ್ಪ : ರಾಜ್ಯದಲ್ಲಿ ತಮ್ಮ ಸಾರ್ವಜನಿಕ ಸೇವೆಯ 100 ದಿನಗಳ ಅವಧಿಯನ್ನು ಸ್ಮರಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ನಾಡಿನ ಜನರನ್ನುದ್ದೇಶಿಸಿ ವಿಶೇಷ ಪತ್ರ ಹಂಚಿಕೊಂಡಿದ್ದಾರೆ. ಈ ಅವಧಿಯಲ್ಲಿ ಕರ್ನಾಟಕವನ್ನು ಮತ್ತಷ್ಟು ದೃಢ ಹಾಗೂ ಸಾಮಾಜಿಕ-ಆರ್ಥಿಕವಾಗಿ ಸಶಕ್ತ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಹಲವು ಮಹತ್ವದ ಯೋಜನೆಗಳು ಮತ್ತು ಕ್ರಮಗಳಿಗೆ ಒತ್ತು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ತಮ್ಮ ಪತ್ರದಲ್ಲಿ, “ಪ್ರಜಾಸೇವಕನಾಗಿ ನಿಮ್ಮ ಸೇವೆ ಮಾಡಲು ನನಗೆ ಅವಕಾಶ ದೊರೆತು ಇಂದಿಗೆ ನೂರು ದಿನಗಳು. ನಾಡಿನ ಪ್ರತಿಯೊಬ್ಬರ ಬದುಕಿನಲ್ಲಿ ಹೊಸ ಬದಲಾವಣೆ ತರಲು ನನಗೆ ಹೆಚ್ಚಿನ ಜವಾಬ್ದಾರಿ ನೀಡಿದ ದಿನಗಳು” ಎಂದು ಡಿ.ಕೆ. ಶಿವಕುಮಾರ್ ಉಲ್ಲೇಖಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಅಂಕಣ ಬರಹ | `ಕಸ್ತೂರಿ’ಯ ನೆರಳು, ಸಹ್ಯಾದ್ರಿ ಮಲಮಕ್ಕಳ ಅಳಲು : ಇಂದಿನ ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ಪ್ರಕಟವಾದ ಮೋಹನ ಹೆಗಡೆ ಅವರ ಅಂಕಣದಲ್ಲಿ ಪಶ್ಚಿಮ ಘಟ್ಟದ ಸಂರಕ್ಷಣೆ ಮತ್ತು ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆಯು ಮಲೆನಾಡು ಹಾಗೂ ಕರಾವಳಿ ಭಾಗದ ಜನರಲ್ಲಿ ತಳಮಳ ಕುರಿತಂತೆ ಲೇಖನ ಮೂಡಿದೆ. ತಲೆತಲಾಂತರಗಳಿಂದ ಅಲ್ಲಿ ಬದುಕುತ್ತಿರುವ ಕೃಷಿಕರನ್ನು ಒಕ್ಕಲೆಬ್ಬಿಸಲಾಗುತ್ತದೆ ಎಂಬ ಆತಂಕ ಸೃಷ್ಟಿಯಾಗಿದ್ದರೂ, ಅರಣ್ಯ ನಾಶಕ್ಕೆ ಮೂಲ ಕಾರಣ ಬಡ ರೈತರಲ್ಲ, ಬದಲಿಗೆ ಸರ್ಕಾರದ ಅನಿಯಂತ್ರಿತ ಯೋಜನೆಗಳು, ಗಣಿಗಾರಿಕೆ ಮತ್ತು ಬೃಹತ್ ಉದ್ಯಮಗಳು. ಜನರ ವಿಶ್ವಾಸವನ್ನು ಗಳಿಸದೆ ಮತ್ತು ಕೇರಳದ ಮಾದರಿಯಲ್ಲಿ ಸ್ಥಳೀಯ ಗ್ರಾಮ ಸಮಿತಿಗಳ ಸಹಭಾಗಿತ್ವವನ್ನು ಪಡೆದುಕೊಳ್ಳದೆ, ಕೇವಲ ರಾಜಕೀಯ ಪ್ರದರ್ಶನಗಳಿಗೆ ಸೀಮಿತವಾಗುತ್ತಿರುವ ಜನಪ್ರತಿನಿಧಿಗಳ ಧೋರಣೆಯಿಂದಾಗಿ ಈ ಸಮಸ್ಯೆ ದೀರ್ಘಕಾಲದಿಂದ ಬಗೆಹರಿಯದೆ ಉಳಿದಿದೆ. ಪರಿಸರ ಸಂರಕ್ಷಣೆ ಮತ್ತು ಸ್ಥಳೀಯರ ಬದುಕಿನ ನಡುವೆ ಸಮತೋಲನ ಕಾಯ್ದುಕೊಳ್ಳುವ ಪ್ರಾಮಾಣಿಕ ಇಚ್ಛಾಶಕ್ತಿ ಈಗಿನ ತುರ್ತು ಅಗತ್ಯವಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
(ಮಾಹಿತಿ ಅಪ್ಡೇಟ್ ಆಗಲಿದೆ)
ಪ್ರತಿ ಹೊಸ ಅಪ್ಡೇಟ್ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್ಡೇಟ್ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.






















