ಆಕ್ಸಲ್ ಬ್ಲೇಡ್ ಕಟ್ ಆಗಿ ಸಾರಿಗೆ ಬಸ್ ಪಲ್ಟಿ : ಬಸ್‌ನ ಆಕ್ಸಲ್ ಬ್ಲೇಡ್ ಕಟ್ ಆಗಿ ಸರ್ಕಾರಿ ಸಾರಿಗೆ ಬಸ್‌ವೊಂದು ಪಲ್ಟಿಯಾದ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಬಳಿ ನಡೆದಿದೆ. ಹಗರಿಬೊಮ್ಮನಹಳ್ಳಿಯಿಂದ ತಂಬ್ರಹಳ್ಳಿಗೆ ತೆರಳುತ್ತಿದ್ದ ಸರ್ಕಾರಿ ಸಾರಿಗೆ ಬಸ್ ಆಕ್ಸಲ್ ಬ್ಲೇಡ್ ಕಟ್ ಆಗಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಉರುಳಿದೆ. ಬಸ್‌ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿಲ್ಲ. ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. (ಮಾಹಿತಿ ಅಪ್ಡೇಟ್ ಆಗಲಿದೆ)
‘ಯಾವುದೇ ಪಕ್ಷದ ನಾಯಕರು ಗಾಬರಿಯಾಗಬೇಕಿಲ್ಲ’ – ಮಂಗಳೂರಿನಲ್ಲಿ ಡಿಕೆಶಿ : ಕರಾವಳಿ ಭಾಗದ ಅಭಿವೃದ್ಧಿ ದೃಷ್ಟಿಯಿಂದ ಮಂಗಳೂರಿನಲ್ಲಿ ಇಂದು ರಾಜ್ಯ ಸಚಿವ ಸಂಪುಟದ ವಿಶೇಷ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ. ಯಾವುದೇ ಪಕ್ಷದ ನಾಯಕರು ಗಾಬರಿಯಾಗುವ ಅಗತ್ಯವಿಲ್ಲ” ಎಂದು ಅವರು ತಿಳಿಸಿದ್ದಾರೆ. ಮಂಗಳೂರಿನ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಸರ್ಕಾರವು ಜನರ ಬದುಕು ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಲಿದೆ ಎಂದು ಹೇಳಿದರು. “ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ ಭಾವನೆ ಮೇಲೆ ರಾಜಕೀಯ ಮಾಡಲ್ಲ. ಎಲ್ಲರ ಚಿಂತನೆಯಂತೆ ನಮ್ಮ ಸರ್ಕಾರ ಕೆಲಸ ಮಾಡಲಿದೆ” ಎಂದು ಅವರು ಭರವಸೆ ನೀಡಿದರು.ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಮಂಗಳೂರಿನಲ್ಲಿ ಇಂದು ಮೊದಲ ರಾಜ್ಯ ಸಚಿವ ಸಂಪುಟ ಸಭೆ : ಕರಾವಳಿ ಭಾಗದ ಜನರ ಬಹುದಿನಗಳ ಆಶಯ, ನಿರೀಕ್ಷೆ ಹಾಗೂ ಅಭಿವೃದ್ಧಿಯ ಬೇಡಿಕೆಗಳಿಗೆ ಸ್ಪಂದಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ವಿಶೇಷ ಸಚಿವ ಸಂಪುಟ ಸಭೆ ಇಂದು (ಸೆ.18) ಮಂಗಳೂರಿನಲ್ಲಿ ನಡೆಯಲಿದೆ. ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಕರಾವಳಿ ಅಭಿವೃದ್ಧಿಯ ದೃಷ್ಟಿಯಿಂದ ಸಭೆ ಮಹತ್ವ ಪಡೆದುಕೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಹಲವು ಸದಸ್ಯರು ಮಂಗಳೂರಿಗೆ ಆಗಮಿಸಿದ್ದು, ಸಭೆಗೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ (ಪ್ರಜಾಸೌಧ)ಯಲ್ಲಿ ಸಭೆ ನಡೆಯಲಿದೆ. ಸಚಿವರ ಆಗಮನದ ಹಿನ್ನೆಲೆಯಲ್ಲಿ ನಗರದ ಕೆಲವು ಪ್ರಮುಖ ರಸ್ತೆಗಳಲ್ಲಿ ತಾತ್ಕಾಲಿಕ ಸಂಚಾರ ಬದಲಾವಣೆಗಳನ್ನೂ ಮಾಡಲಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
(ಮಾಹಿತಿ ಅಪ್ಡೇಟ್ ಆಗಲಿದೆ)
ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.





















