ನಕಲಿ ಔಷಧ ಜಾಲಕ್ಕೆ ಬಿಗ್ ಶಾಕ್ – ಕರ್ನಾಟಕ FDA ಕಠಿಣ ಕ್ರಮ : ಕರ್ನಾಟಕದ ಔಷಧ ನಿಯಂತ್ರಣ ಅಧಿಕಾರಿಗಳು ಬಿದದಿ ಸಮೀಪದ ಪರವಾನಗಿ ರಹಿತ ಘಟಕದ ಮೇಲೆ ನಡೆಸಿದ ದಾಳಿಯ ಬೆನ್ನಲ್ಲೇ ನಕಲಿ ಔಷಧ ಜಾಲದ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ. ಆಗಸ್ಟ್ 18ರಂದು ಕುರುಬರಕೆರನಹಳ್ಳಿಯಲ್ಲಿರುವ ಫಾರ್ಮ್‌ಹೌಸ್‌ನಲ್ಲಿ ನಡೆದ ದಾಳಿಯಲ್ಲಿ ಸುಮಾರು ₹5.05 ಕೋಟಿ ಮೌಲ್ಯದ ಶಂಕಿತ ನಕಲಿ ಔಷಧಗಳು, ಪ್ಯಾಕೇಜಿಂಗ್ ಸಾಮಗ್ರಿ, ಯಂತ್ರೋಪಕರಣಗಳು ಮತ್ತು ನಕಲಿ ಲೇಬಲ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಆರೋಗ್ಯ ಸಚಿವ ಯು.ಟಿ. ಖಾದರ್ ಸಾಮಾಜಿಕ ಜಾಲತಾಣದಲ್ಲಿ ಇಂದು ಪೋಸ್ಟ್ ಮಾಡಿ ನಕಲಿ ಔಷಧಿಗಳ ಮಾರಾಟ ಹಾಗೂ ವಿತರಣೆಯಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಭಾಗಿಯಾಗಿದ್ದ ಒಟ್ಟು 24 ಫಾರ್ಮಾ ವ್ಯಾಪಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಇಂದಿನಿಂದ 3 ದಿನ ವಿಧಾನಮಂಡಲ ವಿಶೇಷ ಅಧಿವೇಶನ : ರಾಜ್ಯದ ತೀವ್ರ ಬರ ಪರಿಸ್ಥಿತಿ ಹಾಗೂ ಪಶ್ಚಿಮಘಟ್ಟಕ್ಕೆ ಸಂಬಂಧಿಸಿದ ಕಸ್ತೂರಿರಂಗನ್ ವರದಿ ಕರಡು ಅಧಿಸೂಚನೆ ಕುರಿತು ಚರ್ಚಿಸಲು ಕರ್ನಾಟಕ ವಿಧಾನಮಂಡಲದ ಮೂರು ದಿನಗಳ ವಿಶೇಷ ಅಧಿವೇಶನ ಸೋಮವಾರದಿಂದ ಆರಂಭವಾಗಿದೆ. ಸೆಪ್ಟೆಂಬರ್ 21ರಿಂದ 23ರವರೆಗೆ ನಡೆಯಲಿರುವ ಅಧಿವೇಶನದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಎರಡೂ ಸದನಗಳಲ್ಲಿ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.
(ಮಾಹಿತಿ ಅಪ್ಡೇಟ್ ಆಗಲಿದೆ)






















