SK Home Ad
Home ಸುದ್ದಿ Samyukta Karnataka News Live: ಕರ್ನಾಟಕ ವಿಧಾನ ಪರಿಷತ್ ಸೇರಿ 4 ರಾಜ್ಯಗಳ ಪರಿಷತ್ ಚುನಾವಣೆಗೆ...

Samyukta Karnataka News Live: ಕರ್ನಾಟಕ ವಿಧಾನ ಪರಿಷತ್ ಸೇರಿ 4 ರಾಜ್ಯಗಳ ಪರಿಷತ್ ಚುನಾವಣೆಗೆ ದಿನಾಂಕ ಪ್ರಕಟ

0
479
ಕರ್ನಾಟಕ ಸೇರಿ 4 ರಾಜ್ಯಗಳ ವಿಧಾನ ಪರಿಷತ್ ಚುನಾವಣೆ: ಅಕ್ಟೋಬರ್ 23ಕ್ಕೆ ಮತದಾನ

‘ರಣ ವಿಕ್ರಮ’ ಬಳಿಕ ಕನ್ನಡದ ರಾಮರಸ ಚಿತ್ರಕ್ಕೆ ಅದಾ ಶರ್ಮಾ ಎಂಟ್ರಿ : ಸ್ಯಾಂಡಲ್‌ವುಡ್‌ನಲ್ಲಿ ನಿರೀಕ್ಷೆ ಮೂಡಿಸಿರುವ ‘ರಾಮರಸ’ ಚಿತ್ರತಂಡದಿಂದ ಇದೀಗ ಮತ್ತೊಂದು ಪ್ರಮುಖ ಅಪ್‌ಡೇಟ್‌ ಹೊರಬಿದ್ದಿದೆ. ಬಾಲಿವುಡ್ ಹಾಗೂ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟಿ ಅದಾ ಶರ್ಮಾ ‘ರಾಮರಸ’ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ 2015ರಲ್ಲಿ ಪುನೀತ್ ರಾಜ್‌ಕುಮಾರ್ ಅಭಿನಯದ ‘ರಣ ವಿಕ್ರಮ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಇದೀಗ ಸುದೀರ್ಘ ವಿರಾಮದ ಬಳಿಕ ‘ರಾಮರಸ’ ಮೂಲಕ ಮತ್ತೆ ಕನ್ನಡಕ್ಕೆ ಮರಳುತ್ತಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ನಿವೃತ್ತ ಹಾಸ್ಟೆಲ್ ಅಧೀಕ್ಷಕನಿಗೆ ಲೋಕಾಯುಕ್ತ ಶಾಕ್ : ಆದಾಯದ ಮೂಲಗಳಿಗೆ ಹೋಲಿಸಿದರೆ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿವೃತ್ತ ಹಾಸ್ಟೆಲ್ ಅಧೀಕ್ಷಕ ಶಿವರಾಜು ಅವರಿಗೆ ಸೇರಿದ ಮನೆ ಹಾಗೂ ಫಾರ್ಮ್‌ಹೌಸ್ ಮೇಲೆ ಮಂಡ್ಯ ಲೋಕಾಯುಕ್ತ ಪೊಲೀಸರು ಮಂಗಳವಾರ ಮುಂಜಾನೆ ದಿಢೀರ್ ಶೋಧ ನಡೆಸಿದ್ದಾರೆ. ಮದ್ದೂರಿನ ಕೊಲ್ಲಿ ವೃತ್ತದ ಸಮೀಪದ ವಿನಾಯಕ ಬಡಾವಣೆಯಲ್ಲಿರುವ ಶಿವರಾಜು ಅವರ ಮನೆ ಹಾಗೂ ಫಾರ್ಮ್‌ಹೌಸ್ ಸೇರಿದಂತೆ ಎರಡು ಸ್ಥಳಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಮಂಡ್ಯ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್ ಬ್ಯಾಟರಾಯಗೌಡ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಒಡಿಶಾ ಕರಾವಳಿಯ ಆಳ ಸಮುದ್ರದಲ್ಲಿ ಅನಿಲ ಪತ್ತೆ : ಭಾರತದ ಆಳ ಸಮುದ್ರದ ತೈಲ ಮತ್ತು ಅನಿಲ ಶೋಧನಾ ಪ್ರಯತ್ನಕ್ಕೆ ಮಹತ್ವದ ಬೆಳವಣಿಗೆ ದೊರೆತಿದೆ. ಸರ್ಕಾರಿ ಸ್ವಾಮ್ಯದ ಆಯಿಲ್ ಆ್ಯಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ (ONGC) ಒಡಿಶಾ ಕರಾವಳಿಯ ಸಮೀಪದ ಮಹಾನದಿ ಆಫ್‌ಶೋರ್ ಬೇಸಿನ್‌ನಲ್ಲಿ ನೈಸರ್ಗಿಕ ಅನಿಲವನ್ನು ಪತ್ತೆಹಚ್ಚಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

KEONICS 50 ವರ್ಷ – AI ಯುಗಕ್ಕೆ ಕರ್ನಾಟಕ ಸಿದ್ಧ: ತಕ ಬುದ್ಧಿಮತ್ತೆ (AI) ಆಧಾರಿತ ತಂತ್ರಜ್ಞಾನವನ್ನು ಗ್ರಾಮೀಣ ಪ್ರದೇಶಗಳ ಮಕ್ಕಳು, ಶಾಲೆಗಳು ಹಾಗೂ ಸಣ್ಣ ಉದ್ಯಮಿಗಳಿಗೂ ತಲುಪಿಸುವ ಉದ್ದೇಶದಿಂದ ಕಿಯೋನಿಕ್ಸ್ ಕೈಗೊಂಡಿರುವ KEO AI ಕಂಪ್ಯೂಟರ್ ಯೋಜನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ನಡೆದ ಕಿಯೋನಿಕ್ಸ್‌ನ 50ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ, ಎಐ ಯುಗಕ್ಕೆ ಪ್ರವೇಶಿಸುತ್ತಿರುವ ಸಂದರ್ಭದಲ್ಲಿ ರಾಜ್ಯದ ಮಕ್ಕಳನ್ನು ಭವಿಷ್ಯದ ತಂತ್ರಜ್ಞಾನಕ್ಕೆ ಸಜ್ಜುಗೊಳಿಸುವ ಪ್ರಯತ್ನ ಅಗತ್ಯವಾಗಿದೆ ಎಂದು ಹೇಳಿದರು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮಹಿಳಾ ತಂಡಕ್ಕೆ ಚಿನ್ನದ ಪದಕ : 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ತನ್ನ ಮೊದಲ ಚಿನ್ನದ ಪದಕವನ್ನು ಮಹಿಳಾ ಕ್ರಿಕೆಟ್ ಮೂಲಕ ಗೆದ್ದುಕೊಂಡಿದೆ. ನಿಸ್ಸಿನ್‌ನ ಕೊರೋಗಿ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ಮಂಗಳವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಮಹಿಳಾ ತಂಡವು ಶ್ರೀಲಂಕಾವನ್ನು 147 ರನ್‌ಗಳಿಂದ ಮಣಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮೊಬೈಲ್ ಸ್ಕ್ರೀನ್ ಗಾರ್ಡ್‌ಗಳಿಗೂ BIS ಮಾನದಂಡ : ರ್ಟ್‌ಫೋನ್‌ಗಳ ಸ್ಕ್ರೀನ್‌ಗಳಿಗೆ ಬಳಸುವ ಗ್ಲಾಸ್ ಸ್ಕ್ರೀನ್ ಪ್ರೊಟೆಕ್ಟರ್‌ಗಳ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಹೊಸ ಭಾರತೀಯ ಮಾನದಂಡವನ್ನು ಪ್ರಕಟಿಸಿದೆ. IS 19348:2025 – Glass Screen Protector — Specification ಎಂಬ ಮಾನದಂಡವನ್ನು 2025ರ ಜುಲೈ 29ರಂದು ಪ್ರಕಟಿಸಲಾಗಿದೆ ಎಂದು BISನ ಅಧಿಕೃತ ದಾಖಲೆ ತಿಳಿಸುತ್ತದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕಲಬುರಗಿ ಜೆಸ್ಕಾಂ ಎಇಇ ಮನೆ-ಕಚೇರಿ ಮೇಲೆ ಲೋಕಾಯುಕ್ತ ದಾಳಿ : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಮಾಡಿರುವ ಆರೋಪದ ಮೇರೆಗೆ ಕಲಬುರಗಿಯ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ (ಎಇಇ) ರಾಜೇಶ್ವರಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಮುಂಜಾನೆ ದಿಢೀರ್ ದಾಳಿ ನಡೆಸಿದ್ದಾರೆ. ​ಕಲಬುರಗಿ ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ರಾಜೇಶ್ವರಿ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಆರಂಭಿಸಿದ್ದಾರೆ. ಕಲಬುರಗಿಯ ಖಾದ್ರೀ ಚೌಕ್‌ನಲ್ಲಿ ರಾಜೇಶ್ವರಿ ಅವರಿಗೆ ಸೇರಿದ ಮತ್ತೊಂದು ಮನೆ ಇದ್ದು, ಅಲ್ಲೂ ಕೂಡ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಸೆ.25ರಿಂದ ಧಾರವಾಡದಲ್ಲಿ ಕೃಷಿ ಮೇಳ : ಕೃಷಿ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ, ಸುಸ್ಥಿರ ಕೃಷಿ ಪದ್ಧತಿಗಳು ಹಾಗೂ ರೈತರಿಗೆ ಅಗತ್ಯವಾದ ವೈಜ್ಞಾನಿಕ ಮಾಹಿತಿಯನ್ನು ಪರಿಚಯಿಸುವ ಉದ್ದೇಶದಿಂದ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಸೆಪ್ಟೆಂಬರ್ 25ರಿಂದ 28ರವರೆಗೆ ಕೃಷಿ ಮೇಳ–2026 ಆಯೋಜಿಸಲಾಗಿದೆ. ನಾಲ್ಕು ದಿನಗಳ ಕಾಲ ನಡೆಯಲಿರುವ ಮೇಳವನ್ನು ‘ಸಶಕ್ತ ಮಹಿಳೆ–ಸುಸ್ಥಿರ ಕೃಷಿ’ ಎಂಬ ಧ್ಯೇಯದೊಂದಿಗೆ ಆಯೋಜಿಸಲಾಗುತ್ತಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮಹಾವೀರ್ ಕರ್ಣ ಫಸ್ಟ್ ಲುಕ್ ಬಿಡುಗಡೆ : ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ಕರ್ಣನ ಕಥೆಯನ್ನು ಆಧರಿಸಿ ನಿರ್ದೇಶಕ ರಮೇಶ್ ವರ್ಮಾ ನಿರ್ಮಾಣದ ಬಹುನಿರೀಕ್ಷಿತ ಪೌರಾಣಿಕ ಚಿತ್ರ ‘ಮಹಾವೀರ್ ಕರ್ಣ’ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ನಟ ರಾಘವ ಲಾರೆನ್ಸ್ ಅವರು ಕರ್ಣನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಪೋಸ್ಟರ್‌ಗಳು ಮಂಗಳವಾರ ಬಿಡುಗಡೆಯಾಗಿದ್ದು, ಚಿತ್ರರಂಗದಲ್ಲಿ ಗಮನ ಸೆಳೆದಿವೆ. ಚಿತ್ರದ ನಿರ್ಮಾಣ ಸಂಸ್ಥೆ ಪೆನ್ ಮೂವೀಸ್ ಸಾಮಾಜಿಕ ಜಾಲತಾಣದಲ್ಲಿ ಫಸ್ಟ್ ಲುಕ್ ಹಂಚಿಕೊಂಡಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ವಿಧಾನ ಪರಿಷತ್ ಸೇರಿ 4 ರಾಜ್ಯಗಳ ಪರಿಷತ್ ಚುನಾವಣೆಗೆ ದಿನಾಂಕ ಪ್ರಕಟ : ಬಿಹಾರ, ಕರ್ನಾಟಕ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದ ವಿಧಾನ ಪರಿಷತ್ತುಗಳ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗಳ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಈ ನಾಲ್ಕು ರಾಜ್ಯಗಳಲ್ಲಿ ತೆರವಾಗಲಿರುವ ಸ್ಥಾನಗಳಿಗೆ ಅಕ್ಟೋಬರ್ 23, 2026ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 27ರಂದು ಮತ ಎಣಿಕೆ ನಡೆಯಲಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕುಷ್ಟಗಿಯನ್ನು ಬರ ಪಟ್ಟಿಗೆ ಸೇರಿಸಲು ಕ್ರಮ – ಅಮರೇಗೌಡ ಬಯ್ಯಾಪುರ ಮನವಿಗೆ ಡಿಸಿಎಂ ಭರವಸೆ : ಮಳೆ ಆಶ್ರಿತ ಪ್ರದೇಶವಾಗಿರುವ ಕುಷ್ಟಗಿ ತಾಲೂಕಿನಲ್ಲಿ ಪ್ರಸಕ್ತ ಮುಂಗಾರು ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ತಾಲೂಕನ್ನು ಬರಪೀಡಿತ ಎಂದು ಘೋಷಿಸಿ ಅಗತ್ಯ ಪರಿಹಾರ ಹಾಗೂ ನೆರವು ಒದಗಿಸಬೇಕು ಎಂದು ಮಾಜಿ ಸಚಿವ ಅಮರೇಗೌಡ ಎಲ್. ಪಾಟೀಲ್ ಬಯ್ಯಾಪುರ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಅವರನ್ನು ಭೇಟಿ ಮಾಡಿದ ಅಮರೇಗೌಡ ಬಯ್ಯಾಪುರ ಅವರು, ಕುಷ್ಟಗಿ ತಾಲೂಕಿನ ವಾಸ್ತವ ಪರಿಸ್ಥಿತಿಯನ್ನು ವಿವರಿಸಿ ಮನವಿ ಸಲ್ಲಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮಕ್ಕಳ ಜೊತೆ ಕುಳಿತು ಉಪಾಹಾರ ಸೇವಿಸಿದ ಸಿಎಂ ವಿಜಯ್ : ತಮಿಳುನಾಡಿನಲ್ಲಿ ಶಾಲಾ ಮಕ್ಕಳಿಗೆ ಉಚಿತ ಉಪಾಹಾರ ಒದಗಿಸುವ ಯೋಜನೆಯ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಲಾಗಿದ್ದು, ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಮಂಗಳವಾರ ಚೆನ್ನೈನಲ್ಲಿ ವಿಸ್ತರಿತ ‘ಪೆರುಂತಲೈವರ್ ಕಾಮರಾಜರ್ ಉಚಿತ ಉಪಾಹಾರ ಯೋಜನೆ’ಗೆ ಚಾಲನೆ ನೀಡಿದರು. ಚೆನ್ನೈನ ತಿರುವಣ್ಮಿಯೂರ್‌ನ ಗಾಂಧಿ ಗ್ರಾಮಂ ಸರ್ಕಾರಿ ಮಧ್ಯಮ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ವಿಜಯ್ ಅವರು ವಿದ್ಯಾರ್ಥಿಗಳಿಗೆ ಸ್ವತಃ ಉಪಾಹಾರ ಬಡಿಸಿದರು. ಬಳಿಕ ಮಕ್ಕಳೊಂದಿಗೆ ಕುಳಿತು ಉಪಾಹಾರ ಸೇವಿಸಿದರು. ಶಾಲೆಯ ತರಗತಿ ಕೊಠಡಿಗಳಿಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಉಪಾಹಾರ ವ್ಯವಸ್ಥೆಯನ್ನೂ ಪರಿಶೀಲಿಸಿದರು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯದಲ್ಲಿ ಲೋಕಾಯುಕ್ತ ಬಿಗ್ ಆಪರೇಷನ್ – ಕಲಬುರಗಿ, ಹುಬ್ಬಳ್ಳಿ ಸೇರಿ 5 ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ : ಅಕ್ರಮ ಆಸ್ತಿ ಗಳಿಕೆ ಮತ್ತು ಲಂಚದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್ 22ರ ಮುಂಜಾನೆ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಕಲಬುರಗಿ, ಹುಬ್ಬಳ್ಳಿ, ಚಿಕ್ಕಬಳ್ಳಾಪುರ, ಬೀದರ್ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆಗಳು ಮತ್ತು ಕಚೇರಿಗಳಲ್ಲಿ ಶೋಧ ನಡೆಸಲಾಗಿದೆ. ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಸ್ಕಾಂ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ : ಹುಬ್ಬಳ್ಳಿಯ ಹೆಸ್ಕಾಂ ಎಇಇ ಮನೆ ಹಾಗೂ ಕಚೇರಿ, ಧಾರವಾಡದ ಸಹೋದರನ ಮನೆ ಮೇಲೆ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಹೆಸ್ಕಾಂ ಎಇಇ ಕಿರಣಕುಮಾರ್ ಬೈಂದೂರ್ ಅವರ ಮನೆ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕಾರು-ಬೈಕ್ ಡಿಕ್ಕಿ – ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಾವು : ದಾವಣಗೆರೆ: ತಾಲ್ಲೂಕಿನ ಕೊಗ್ಗನೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಸೋಮವಾರ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಶಿವಗಂಗಾ ಗ್ರಾಮದ ನಾಗರಾಜಪ್ಪ ಅವರ ಪುತ್ರಿ, ದಾವಣಗೆರೆಯ ಎವಿಕೆ ಕಾಲೇಜಿನ ವಿದ್ಯಾರ್ಥಿನಿ ಋತು (17) ಎಂದು ಗುರುತಿಸಲಾಗಿದೆ. ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.

(ಮಾಹಿತಿ ಅಪ್​ಡೇಟ್ ಆಗಲಿದೆ)