ಭಾರತದ IMEC ಯೋಜನೆಗೆ ಟ್ರಂಪ್ ಬೆಂಬಲ: ಹೋರ್ಮುಜ್ ಜಲಸಂಧಿಯಲ್ಲಿನ ಉದ್ವಿಗ್ನತೆ ಮತ್ತು ವಾಣಿಜ್ಯ ಹಡಗುಗಳ ಸಂಚಾರದ ಮೇಲಿನ ಆತಂಕದ ನಡುವೆಯೇ ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ (IMEC) ಯೋಜನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲ ವ್ಯಕ್ತಪಡಿಸಿದ್ದಾರೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಹಿನ್ನೆಲೆಯಲ್ಲಿ ನಡೆದ ಸಭೆಗಳಲ್ಲಿ ಗಲ್ಫ್ ರಾಷ್ಟ್ರಗಳು ಹಾಗೂ ಜೋರ್ಡಾನ್ ಸೇರಿದಂತೆ ಅರಬ್ ಪ್ರತಿನಿಧಿಗಳೊಂದಿಗೆ ಈ ಕುರಿತು ಚರ್ಚೆ ನಡೆದಿದೆ. ಭಾರತ, ಕೊಲ್ಲಿ ಪ್ರದೇಶ ಮತ್ತು ಯುರೋಪ್ ನಡುವಿನ ವ್ಯಾಪಾರ ಸಂಪರ್ಕವನ್ನು ಬಲಪಡಿಸುವ ಉದ್ದೇಶದ IMEC ಯೋಜನೆಗೆ 2023ರ ನವದೆಹಲಿ G20 ಶೃಂಗಸಭೆಯಲ್ಲಿ ಚಾಲನೆ ನೀಡಲಾಗಿತ್ತು. ಯೋಜನೆಯಡಿ ಭಾರತದಿಂದ ಸಮುದ್ರ ಮಾರ್ಗದ ಮೂಲಕ ಕೊಲ್ಲಿ ಪ್ರದೇಶಕ್ಕೆ ಸರಕು ಸಾಗಣೆ, ಅಲ್ಲಿಂದ ರೈಲು ಮತ್ತು ಇತರ ಸಂಪರ್ಕ ವ್ಯವಸ್ಥೆಗಳ ಮೂಲಕ ಯುರೋಪ್‌ಗೆ ಸಾಗಿಸುವ ಬಹುಮಾದರಿ ಜಾಲವನ್ನು ಅಭಿವೃದ್ಧಿಪಡಿಸುವ ಉದ್ದೇಶವಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ರೈತರ ಸಂಕಷ್ಟ, ಬರ ಪರಿಹಾರ ಇಂದು ಸದನದಲ್ಲಿ ಪ್ರಮುಖ ಚರ್ಚೆ – ಅಧಿವೇಶನ ವಿಸ್ತರಣೆಗೆ ಬೇಡಿಕೆ? :ಕರ್ನಾಟಕ ವಿಧಾನಮಂಡಲ ವಿಶೇಷ ಅಧಿವೇಶನದ ಕೊನೆಯ ದಿನ ಬರ ಪರಿಸ್ಥಿತಿ, ಪರಿಹಾರ ಹಾಗೂ ರೈತರ ಸಂಕಷ್ಟದ ಕುರಿತು ಚರ್ಚೆ ನಡೆಯಲಿದೆ. ಸಿಎಂ ಡಿಕೆ ಶಿವಕುಮಾರ್ ಉತ್ತರ ನೀಡಲಿದ್ದಾರೆ. ಅಧಿವೇಶನದ ಕೊನೆಯ ದಿನ ಬರ, ರೈತರ ಸಂಕಷ್ಟ ಮತ್ತು ಪರಿಹಾರ ಕ್ರಮಗಳ ಕುರಿತು ನಡೆಯಲಿರುವ ಚರ್ಚೆ ಹಾಗೂ ಸರ್ಕಾರದ ಉತ್ತರದ ಬಳಿಕ ಅಧಿವೇಶನ ವಿಸ್ತರಣೆ ಕುರಿತು ಯಾವುದೇ ನಿರ್ಧಾರ ಹೊರಬರುತ್ತದೆಯೇ ಎಂಬುದು ಕುತೂಹಲ ಮೂಡಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.
(ಮಾಹಿತಿ ಅಪ್ಡೇಟ್ ಆಗಲಿದೆ)






















