WPL 2027 – ಐದು ತಂಡಗಳ ರಿಟೆನ್ಶನ್ ಪಟ್ಟಿ ಪ್ರಕಟ : ಮಹಿಳಾ ಪ್ರೀಮಿಯರ್ ಲೀಗ್ (WPL) 2027ರ ಸಿದ್ಧತೆಗಳು ವೇಗ ಪಡೆದುಕೊಂಡಿದ್ದು, ಸೆಪ್ಟೆಂಬರ್ 28ರಂದು ಐದು ಫ್ರಾಂಚೈಸಿಗಳು ತಮ್ಮ ಉಳಿಸಿಕೊಂಡ (Retained) ಹಾಗೂ ಬಿಡುಗಡೆ ಮಾಡಿದ ಆಟಗಾರರ ಪಟ್ಟಿಯನ್ನು ಪ್ರಕಟಿಸಿವೆ. 2027ರ WPL ಜನವರಿ 14ರಿಂದ ಫೆಬ್ರವರಿ 7ರವರೆಗೆ ನಡೆಯಲಿದ್ದು, ಆಟಗಾರರ ಹರಾಜು ಅಕ್ಟೋಬರ್ 28ರಂದು ಕೊಚ್ಚಿಯಲ್ಲಿ ನಡೆಯಲಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಗಡುವು ವಿಸ್ತರಣೆ : 2026-27ರ ಮೌಲ್ಯಮಾಪನ ವರ್ಷಕ್ಕೆ (AY 2026-27) ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಗಡುವನ್ನು ಕೇಂದ್ರ ನೇರ ತೆರಿಗೆಗಳ ಮಂಡಳಿ (CBDT) ವಿಸ್ತರಿಸಿದೆ. ಆದಾಯ ತೆರಿಗೆ ಕಾಯ್ದೆ, 1961ರ ಸೆಕ್ಷನ್ 139(1)ರ ವಿವರಣೆ 2ರ ಕೋಷ್ಟಕದ ವಿಭಾಗ 2ರಲ್ಲಿ ಉಲ್ಲೇಖಿಸಲಾದ ಹಾಗೂ ತೆರಿಗೆ ಆಡಿಟ್ಗೆ ಒಳಪಡುವ ನಿರ್ದಿಷ್ಟ ವರ್ಗದ ತೆರಿಗೆದಾರರಿಗೆ ಈ ಸೌಲಭ್ಯ ಅನ್ವಯಿಸುತ್ತದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರಿಗಾಗಿ ರಕ್ಷಣಾ ಸಚಿವರಿಗೆ ಡಿಕೆಶಿ ಮನವಿ : ಬೆಂಗಳೂರಿನ ನಗರಾಭಿವೃದ್ಧಿ, ಸಂಚಾರ ವ್ಯವಸ್ಥೆ ಹಾಗೂ ಮೂಲಸೌಕರ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ರಕ್ಷಣಾ ಭೂಮಿಯ ಬಳಕೆ ಮತ್ತು ವಿವಿಧ ಅನುಮತಿಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಬೆಂಗಳೂರಿನ ಹಲವು ಪ್ರಮುಖ ಯೋಜನೆಗಳಿಗೆ ಸಂಬಂಧಿಸಿದಂತೆ ರಕ್ಷಣಾ ಸಚಿವಾಲಯದ ಸಹಕಾರವನ್ನು ವಿಸ್ತರಿಸುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. ನಗರದ ಸಂಪರ್ಕ ವ್ಯವಸ್ಥೆ, ಸಾರ್ವಜನಿಕ ಹಸಿರು ಪ್ರದೇಶ, ರಸ್ತೆ ಅಭಿವೃದ್ಧಿ ಹಾಗೂ ಭವಿಷ್ಯದ ನಗರ ಮೂಲಸೌಕರ್ಯಕ್ಕೆ ಸಂಬಂಧಿಸಿದ ಒಟ್ಟು ಏಳು ಪ್ರಮುಖ ವಿಷಯಗಳನ್ನು ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಮೈಸೂರು ದಸರಾಕ್ಕೆ ಹಲವು ಕಾರ್ಯಕ್ರಮಗಳ ಪೋಸ್ಟರ್ ಅನಾವರಣ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ನಾಡಹಬ್ಬವನ್ನು ಮತ್ತಷ್ಟು ವೈವಿಧ್ಯಮಯಗೊಳಿಸುವ ಉದ್ದೇಶದಿಂದ ಆಯೋಜಿಸಿರುವ ವಿವಿಧ ವಿಶೇಷ ಕಾರ್ಯಕ್ರಮಗಳ ಪೋಸ್ಟರ್ಗಳನ್ನು ಬಿಡುಗಡೆ ಮಾಡಲಾಗಿದೆ. ಅರಮನೆ ಅಭಿವೃದ್ಧಿ ಮಂಡಳಿಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ದಸರಾ, ರೈತ ದಸರಾ, ಕಂಬಳ, ಯೋಗ ದಸರಾ, ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ, ಶ್ವಾನ ಹಾಗೂ ಮುದ್ದು ಪ್ರಾಣಿಗಳ ಪ್ರದರ್ಶನ ಸೇರಿದಂತೆ ಹಲವು ಕಾರ್ಯಕ್ರಮಗಳ ಪೋಸ್ಟರ್ಗಳನ್ನು ಅನಾವರಣಗೊಳಿಸಲಾಯಿತು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
UPI ಶುಲ್ಕ ವಿವಾದ – RBI, NPCIಗೆ ಸುಪ್ರೀಂ ಕೋರ್ಟ್ ನೋಟಿಸ್ : ₹2,000ಕ್ಕಿಂತ ಹೆಚ್ಚಿನ ಮೊತ್ತದ ನಿರ್ದಿಷ್ಟ UPI Person-to-Merchant (P2M) ವಹಿವಾಟುಗಳ ಮೇಲೆ ಶೇ.0.4ರಷ್ಟು Merchant Discount Rate (MDR) ವಿಧಿಸುವ ಹೊಸ ವ್ಯವಸ್ಥೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಭಾರತೀಯ ರಿಸರ್ವ್ ಬ್ಯಾಂಕ್ (RBI) ಹಾಗೂ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI)ಗೆ ನೋಟಿಸ್ ನೀಡಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಮಹದಾಯಿ ಹೋರಾಟದ ವೇಳೆ ರೈಲು ತಡೆ ಪ್ರಕರಣ – ಕೋಡಿಹಳ್ಳಿ ಚಂದ್ರಶೇಖರ್ ಅರೆಸ್ಟ್ : 3 ವರ್ಷಗಳ ಹಿಂದಿನ ರೈಲು ತಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ಹೋರಾಟಗಾರ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಹುಬ್ಬಳ್ಳಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯ ಹೊರಡಿಸಿದ್ದ ವಾರಂಟ್ ಆಧಾರದ ಮೇಲೆ ಈ ಬಂಧನ ನಡೆದಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ. ಶಿರಸಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಕೋಡಿಹಳ್ಳಿ ಚಂದ್ರಶೇಖರ್ ಆಗಮಿಸಿದ್ದರು. ಈ ವೇಳೆ ಶಿರಸಿ ಪೊಲೀಸರ ಸಹಕಾರ ಪಡೆದು ಹುಬ್ಬಳ್ಳಿ ರೈಲ್ವೆ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಬಳಿಕ ಅವರನ್ನು ಹುಬ್ಬಳ್ಳಿಗೆ ಕರೆದೊಯ್ಯಲಾಗಿದ್ದು, ಸೆಪ್ಟೆಂಬರ್ 28ರಂದು ಹುಬ್ಬಳ್ಳಿ ಜೆಎಂಎಫ್ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಕೊಪ್ಪಳದ ಗವಿಮಠಕ್ಕೆ ಸಚಿವ ತಂಗಡಗಿ ಭೇಟಿ – ದಸರಾ ಉದ್ಘಾಟನೆಗೆ ಶ್ರೀಗಳಿಗೆ ಆಹ್ವಾನ: ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಗೆ ಪರಮಪೂಜ್ಯ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳನ್ನು ಕರ್ನಾಟಕ ಸರ್ಕಾರದ ವತಿಯಿಂದ ಗೌರವಪೂರ್ವಕವಾಗಿ ಆಹ್ವಾನಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಇಂದು ಕೊಪ್ಪಳದ ಗವಿಮಠಕ್ಕೆ ಭೇಟಿ ನೀಡಿ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳನ್ನು ಭೇಟಿಯಾಗಿ ದಸರಾ ಮಹೋತ್ಸವದ ಉದ್ಘಾಟನೆಗೆ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಶ್ರೀಗಳ ಆಶೀರ್ವಾದ ಹಾಗೂ ಸಾನ್ನಿಧ್ಯವನ್ನು ಕೋರಲಾಯಿತು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಹಿಂದೂ–ಮುಸ್ಲಿಂ ಸೌಹಾರ್ದತೆಗೆ ಮಾದರಿಯಾದ ಹೂವಿನಹಡಗಲಿ : ಗಣಪತಿ ಮೆರವಣಿಗೆ ವೇಳೆ ಉಂಟಾಗಿದ್ದ ಗೊಂದಲದ ಬಳಿಕ ಹೂವಿನಹಡಗಲಿ ಪಟ್ಟಣದಲ್ಲಿ ಶಾಂತಿ ಮತ್ತು ಸೌಹಾರ್ದತೆ ಮೂಡಿದ್ದು, ಹಿಂದೂ–ಮುಸ್ಲಿಂ ಬಾಂಧವರು ಪರಸ್ಪರ ಸಹಕಾರದ ಮೂಲಕ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ. ಹೂವಿನಹಡಲಿ ಪಟ್ಟಣದ ಕೊರವರ ಓಣಿಯಲ್ಲಿ ಮರುಪ್ರತಿಷ್ಠಾಪನೆಗೊಂಡ ಗಣಪತಿ ಮೂರ್ತಿಗೆ ಇಸ್ಲಾಂಪೇಟೆಯ ಮುಸ್ಲಿಂ ಬಾಂಧವರು ಪೂಜೆ ಸಲ್ಲಿಸಿದ್ದು ವಿಶೇಷ ಗಮನ ಸೆಳೆಯಿತು. ಪರಸ್ಪರ ಗೌರವ ಹಾಗೂ ಸಹಬಾಳ್ವೆಯ ಸಂದೇಶ ಸಾರಿದ ಈ ಬೆಳವಣಿಗೆ ಸ್ಥಳೀಯರಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
AI ಜಗತ್ತಿನಲ್ಲಿ ಸಚಿನ್ ಇನ್ನಿಂಗ್ಸ್ – OpenAI ಜೊತೆ ಕೈಜೋಡಿಸಿದ ದಿಗ್ಗಜ! : ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು OpenAI ಜೊತೆಗಿನ ತಮ್ಮ ಹೊಸ ಪಾಲುದಾರಿಕೆಯನ್ನು ಘೋಷಿಸಿದ್ದು, ChatGPT ಮೂಲಕ ತಂತ್ರಜ್ಞಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಳಸುವ ಹಾಗೂ ಹೊಸ ಸಾಧ್ಯತೆಗಳನ್ನು ಅನ್ವೇಷಿಸುವ ಬಗ್ಗೆ ಉತ್ಸಾಹ ವ್ಯಕ್ತಪಡಿಸಿದ್ದಾರೆ. ChatGPT ಬಳಕೆಯ ಹೊಸ ಸಾಧ್ಯತೆಗಳು, ತಮ್ಮ ಅನುಭವಗಳು ಮತ್ತು ಮುಂದಿನ ಯೋಜನೆಗಳ ಕುರಿತು ಸಚಿನ್ ಹಂಚಿಕೊಂಡ ಮಾಹಿತಿ ಇಲ್ಲಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
IIT ಧಾರವಾಡದಲ್ಲಿ ಸಂಸ್ಕೃತ ಕಲಿಯಲು ಅವಕಾಶ : ಸಂಸ್ಕೃತ ಭಾಷೆ ಹಾಗೂ ಸಾಹಿತ್ಯವನ್ನು ಕಲಿಯಲು ಆಸಕ್ತರಿಗೆ ಮಹತ್ವದ ಅವಕಾಶ ದೊರೆತಿದ್ದು, ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯ ಮತ್ತು ಐಐಟಿ ಧಾರವಾಡದ ಜಂಟಿ ಸಹಯೋಗದಲ್ಲಿ ನಡೆಸಲಾಗುವ ಸಂಸ್ಕೃತ ಪ್ರಮಾಣಪತ್ರ ಮತ್ತು ಡಿಪ್ಲೊಮಾ ಕೋರ್ಸ್ಗಳಿಗೆ 2026–27ನೇ ಶೈಕ್ಷಣಿಕ ಅವಧಿಯ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಅಫ್ಘಾನಿಸ್ತಾನ ವಿರುದ್ಧ ಪಂದ್ಯವಿಲ್ಲದೆ ಭಾರತಕ್ಕೆ ಸೆಮಿಫೈನಲ್ ಟಿಕೆಟ್ : ಏಷ್ಯನ್ ಗೇಮ್ಸ್ 2026ರ ಪುರುಷರ ಕ್ರಿಕೆಟ್ ಕ್ವಾರ್ಟರ್ಫೈನಲ್ನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು, ಭಾರತ ಯಾವುದೇ ಎಸೆತ ಆಡದೆ ಸೆಮಿಫೈನಲ್ಗೆ ಪ್ರವೇಶಿಸಿದೆ. ನಿಸ್ಸಿನ್ನ ಕೊರೋಗಿ ಸ್ಪೋರ್ಟ್ಸ್ ಪಾರ್ಕ್ನಲ್ಲಿ ನಿರಂತರ ಮಳೆ ಹಾಗೂ ಮೈದಾನ ತೇವವಾಗಿದ್ದ ಕಾರಣ ಪಂದ್ಯ ಆರಂಭಿಸಲು ಸಾಧ್ಯವಾಗಲಿಲ್ಲ. ಟಾಸ್ ಕೂಡ ನಡೆಯದೆ ಭಾರತ ನಿಯಮಾನುಸಾರ ಸೆಮಿಫೈನಲ್ಗೆ ಪ್ರವೇಶಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ನಕಲಿ ಔಷಧ ಪ್ರಕರಣದಲ್ಲಿ ಆರೋಪಿ ಪ್ರಶಾಂತ್ ಬಂಧನ : ರಾಮನಗರದ ಬಿಡದಿ ಸೇರಿದಂತೆ ಕರ್ನಾಟಕದ ವಿವಿಧೆಡೆ ಪತ್ತೆಯಾಗಿರುವ ನಕಲಿ ಔಷಧ ಜಾಲದ ತನಿಖೆ ಮುಂದುವರಿದಿರುವ ನಡುವೆಯೇ, ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನೆಂದು ಗುರುತಿಸಲಾಗಿರುವ ಆರ್. ಪ್ರಶಾಂತ್ನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಬಂಧಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಇಂದಿನಿಂದ ನಡೆಯಬೇಕಿದ್ದ ಬ್ಯಾಂಕ್ ಮುಷ್ಕರ ಮುಂದೂಡಿಕೆ : ಸೆಪ್ಟೆಂಬರ್ 28ರಿಂದ 30ರವರೆಗೆ ಮೂರು ದಿನಗಳ ಕಾಲ ನಡೆಯಬೇಕಿದ್ದ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರವನ್ನು ಮುಂದೂಡಲಾಗಿದೆ. ಹೀಗಾಗಿ ಇಂದಿನಿಂದ ಬ್ಯಾಂಕ್ ಶಾಖೆಗಳ ಸಾಮಾನ್ಯ ಸೇವೆಗಳಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ತಿಳಿಸಲಾಗಿದೆ. ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ನೇತೃತ್ವದಲ್ಲಿ ಸೆಪ್ಟೆಂಬರ್ 28ರಿಂದ ಮೂರು ದಿನಗಳ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಐದು ದಿನಗಳ ಕೆಲಸದ ವಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬ್ಯಾಂಕ್ ನೌಕರರ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದ್ದವು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರತಿ ಹೊಸ ಅಪ್ಡೇಟ್ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್ಡೇಟ್ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.
- ಉಸಿರುಗಟ್ಟಿಸುವ ಕಾಯಿಲೆ ನ್ಯುಮೋನಿಯಾ: ಎಚ್ಚರ ವಹಿಸದಿದ್ದರೆ ಜೀವಕ್ಕೇ ಕುತ್ತು!
- ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಮತ್ತೊಂದು ಸ್ಫೋಟಕ ತಿರುವು!
- ಅಂಕಣ ಬರಹ | ಪ್ರಾಮಾಣಿಕ ಅಧಿಕಾರಿ ಪಾದ ನಿಮಗೆ ಸಿಗದು ಬಿಡಿ!
- ದೀಪಾವಳಿ ಸಂಭ್ರಮದ ನಡುವೆ ಪಟಾಕಿ ಅವಾಂತರ; 41ಕ್ಕೂ ಹೆಚ್ಚು ಮಕ್ಕಳಿಗೆ ಗಾಯ
- ನ. 13ಕ್ಕೆ ಬೆಂಗಳೂರು–ಮಂಗಳೂರು–ಮಡಗಾಂವ್ ವಂದೇ ಭಾರತ್ ರೈಲು ಸಂಚಾರ ಆರಂಭ
(ಮಾಹಿತಿ ಅಪ್ಡೇಟ್ ಆಗಲಿದೆ)






















