ತಮಿಳುನಾಡಿನ ವಿದ್ಯಾರ್ಥಿಗಳಿಗೆ ಕೇರಳದಲ್ಲಿ ದುರಂತ ಅಂತ್ಯ – ಲಾರಿಗೆ ಕಾರು ಡಿಕ್ಕಿ, 8 ಮಂದಿ ಸಾವು : ಕೇರಳದ ತ್ರಿಶೂರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಮಿಳುನಾಡಿನ ದಿಂಡಿಗಲ್‌ನ ಎಂಜಿನಿಯರಿಂಗ್ ಕಾಲೇಜಿನ ಎಂಟು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಕೈಪಮಂಗಲಂನ ಪಣಂಬಿಕ್ಕುನ್ನು ಸೆಂಟರ್ ಬಳಿ ರಾತ್ರಿ ಸುಮಾರು 11.40ಕ್ಕೆ ಅಪಘಾತ ಸಂಭವಿಸಿದೆ. ತಮಿಳುನಾಡು ನೋಂದಣಿಯ ಕಾರು ಗುರುವಾಯೂರಿನಿಂದ ತೆರಳುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಸರಕು ಸಾಗಣೆ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರೊಳಗೆ ಸಿಲುಕಿದ್ದವರನ್ನು ಹೊರತೆಗೆಯಲು ರಕ್ಷಣಾ ಸಿಬ್ಬಂದಿ ಕಾರಿನ ಭಾಗಗಳನ್ನು ಕತ್ತರಿಸಬೇಕಾಯಿತು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ರಾಷ್ಟ್ರೀಯ ಶಿಕ್ಷಕರಿಗೆ ಮೋದಿ ಆತಿಥ್ಯ – ಶಿಕ್ಷಣದ ಹೊಸ ವಿಧಾನಗಳ ಕುರಿತು ಚರ್ಚೆ : ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪುರಸ್ಕೃತರೊಂದಿಗೆ 7 ಲೋಕ ಕಲ್ಯಾಣ ಮಾರ್ಗದಲ್ಲಿ ಸಂವಾದ ನಡೆಸಿದರು. ನವೀನ ಬೋಧನಾ ವಿಧಾನ, NEP, ತಾಯ್ನುಡಿ ಶಿಕ್ಷಣ ಸೇರಿದಂತೆ ಹಲವು ವಿಚಾರ ಚರ್ಚೆಯಾದವು. ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪುರಸ್ಕೃತರನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿ ಅವರೊಂದಿಗೆ ನೇರವಾಗಿ ಸಂವಾದ ನಡೆಸಿರುವುದು ಶಿಕ್ಷಕರ ಸೇವೆಯನ್ನು ಗೌರವಿಸುವ ವಿಶೇಷ ಸಂದರ್ಭವಾಗಿದೆ. ದೇಶದ ಮುಂದಿನ ಪೀಳಿಗೆಯನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರವನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿರುವ ಈ ಸಂವಾದ ಗಮನ ಸೆಳೆದಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
(ಮಾಹಿತಿ ಅಪ್ಡೇಟ್ ಆಗಲಿದೆ)
ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.





















