ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು – ರೌಡಿಶೀಟರ್ ಹತ್ಯೆ : ರೌಡಿಶೀಟರ್ ಕಿರಣ್ ಅಲಿಯಾಸ್ ಕುಳ್ಳಿ ಕಿರಣ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಸೋಮವಾರ ಬೆಳಗ್ಗೆ ಶಿವಮೊಗ್ಗದಲ್ಲಿ ನಡೆದಿದೆ. ಎನ್.ಆರ್.ಪುರ ರಸ್ತೆಯ ಲಿಂಗಾಪುರ ಗ್ರಾಮದ ಬಳಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಆರೋಪಿ ಉಮೇಶ್ ನಾಯ್ಕ್ (27) ಗಾಯಗೊಂಡಿದ್ದಾನೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಸತ್ಯ ನಿಕೇತನ ಕಟ್ಟಡ ಕುಸಿತ – ಮೃತರ ಸಂಖ್ಯೆ 6ಕ್ಕೆ ಏರಿಕೆ : ನವದೆಹಲಿಯ ಸತ್ಯ ನಿಕೇತನ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಅವಶೇಷಗಳಡಿ ಸಿಲುಕಿದ್ದ ಮತ್ತೊಬ್ಬರನ್ನು ರಕ್ಷಿಸಿದರೂ ಅವರು ಮೃತಪಟ್ಟ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದುವರೆಗೆ 11 ಮಂದಿಯನ್ನು ರಕ್ಷಿಸಲಾಗಿದೆ. ಏಮ್ಸ್ ಟ್ರಾಮಾ ಸೆಂಟರ್‌ಗೆ 11 ಗಾಯಾಳುಗಳನ್ನು ದಾಖಲಿಸಲಾಗಿದ್ದು, ಐವರು ಮೃತಪಟ್ಟ ಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಮತ್ತೊಬ್ಬರು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಮೂವರು ಚಿಕಿತ್ಸೆ ಪಡೆಯುತ್ತಿದ್ದು, ಒಬ್ಬರಿಗೆ ಅಂಗ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮತ್ತೊಬ್ಬರನ್ನು ಸಣ್ಣ ಗಾಯಗಳ ಹಿನ್ನೆಲೆಯಲ್ಲಿ ವೀಕ್ಷಣೆಯ ಬಳಿಕ ಬಿಡುಗಡೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ದೆಹಲಿ ಸರ್ಕಾರ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದ್ದು, ಕಟ್ಟಡ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕಟ್ಟಡ ಕುಸಿತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
(ಮಾಹಿತಿ ಅಪ್ಡೇಟ್ ಆಗಲಿದೆ)
ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.






















