ಬೆಳ್ಳಂಬೆಳಗ್ಗೆ ಯಶವಂತಪುರ ಎಪಿಎಂಸಿಗೆ ಡಿಕೆಶಿ ದಿಢೀರ್ ಎಂಟ್ರಿ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಬೆಳಗ್ಗೆ ಯಶವಂತಪುರ ಎಪಿಎಂಸಿಗೆ ದಿಢೀರ್ ಭೇಟಿ ನೀಡಿ ರೈತರು, ಸ್ಥಳೀಯ ವರ್ತಕರು ಹಾಗೂ ಕೂಲಿಕಾರರೊಂದಿಗೆ ನೇರವಾಗಿ ಮಾತುಕತೆ ನಡೆಸಿದರು. ಯಾವುದೇ ಮುನ್ಸೂಚನೆಯಿಲ್ಲದೆ ಮಾರುಕಟ್ಟೆಗೆ ಆಗಮಿಸಿದ ಸಿಎಂ, ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿ ವಿವಿಧ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು. ಎಪಿಎಂಸಿಗೆ ಭೇಟಿ ನೀಡಿದ ವೇಳೆ ಡಿ.ಕೆ. ಶಿವಕುಮಾರ್ ಅವರು ರೈತರು ಹಾಗೂ ಮಾರುಕಟ್ಟೆಯಲ್ಲಿನ ವರ್ತಕರೊಂದಿಗೆ ಕುಳಿತು ಅವರ ಅಹವಾಲುಗಳನ್ನು ಆಲಿಸಿದರು. ಕೃಷಿ ಉತ್ಪನ್ನಗಳ ಮಾರಾಟ, ಮಾರುಕಟ್ಟೆಯಲ್ಲಿನ ಸೌಲಭ್ಯಗಳು, ವ್ಯಾಪಾರಕ್ಕೆ ಎದುರಾಗುತ್ತಿರುವ ಸಮಸ್ಯೆಗಳು ಸೇರಿದಂತೆ ಸ್ಥಳೀಯವಾಗಿ ಎದುರಾಗುತ್ತಿರುವ ಹಲವು ವಿಚಾರಗಳ ಕುರಿತು ಅವರು ಮಾಹಿತಿ ಪಡೆದರು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಅಪಘಾತದಲ್ಲಿ ಗಾಯಗೊಂಡ ಚಿರತೆ ರಕ್ಷಣೆಗೆ ಹೋದ ಸಿಬ್ಬಂದಿ ಮೇಲೆ ದಾಳಿ : ದಾವಣಗೆರೆ ಅನಗೋಡು ಬಳಿಯ NH-48ರಲ್ಲಿ ಅಪಘಾತಕ್ಕೀಡಾದ ಚಿರತೆ ರಕ್ಷಣೆ ವೇಳೆ ಅರಣ್ಯ ಸಿಬ್ಬಂದಿ ಮೇಲೆ ದಾಳಿ ನಡೆಸಿದೆ. ಸಿಬ್ಬಂದಿಗೆ ಗಾಯವಾಗಿದ್ದು, ಬಳಿಕ ಚಿರತೆಯನ್ನು ಅರವಳಿಕೆ ನೀಡಿ ಸೆರೆಹಿಡಿಯಲಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
(ಮಾಹಿತಿ ಅಪ್ಡೇಟ್ ಆಗಲಿದೆ)
ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.






















