SK Home Ad
Home ಸುದ್ದಿ Samyukta Karnataka News Live: ಬೆಳ್ಳಂಬೆಳಗ್ಗೆ ಸಚಿವ ಸತೀಶ್​ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ

Samyukta Karnataka News Live: ಬೆಳ್ಳಂಬೆಳಗ್ಗೆ ಸಚಿವ ಸತೀಶ್​ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ

0
73
File Photo

‘ನನ್ನನ್ನು ಭಗೋಡ ಎಂದು ಏಕೆ ಕರೆಯುತ್ತೀರಿ?’ – ಭಾರತ ಸರ್ಕಾರದ ವಿರುದ್ಧ ವಿಜಯ್ ಮಲ್ಯ ಆರೋಪ : ವಿಜಯ್ ಮಲ್ಯ ಅವರು 1992ರಿಂದ ಯುಕೆ ಖಾಯಂ ನಿವಾಸಿಯಾಗಿದ್ದು, ಕಾನೂನು ನಿರ್ಬಂಧದಿಂದ ಯುಕೆ ತೊರೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ‘ಭಗೋಡ’ ʼವಂಚಕʼ ಎನ್ನುವುದಕ್ಕೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ವಾಸ್ಕೋ-ಕುಲೆಂ ಮಾರ್ಗದ ಎರಡು DEMU ರೈಲುಗಳು ತಾತ್ಕಾಲಿಕ ರದ್ದು : ವಾಸ್ಕೋ ಡ ಗಾಮಾ – ಕುಲೆಂ ವಿಭಾಗದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಎರಡು ಪ್ರಯಾಣಿಕ ರೈಲುಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಳ್ಳಂಬೆಳಗ್ಗೆ ಸಚಿವ ಸತೀಶ್​ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದ ಮೇಲೆಯೇ ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿ ಮತ್ತೊಂದು ಬಿಗ್ ಶಾಕ್ ನೀಡಿದ್ದಾರೆ. ಈ ಹಿಂದೆಯೂ ಸತೀಶ್ ಸಹೋದರಿ ಪತಿಯಾದ ಮಂಜುನಾಥ್ ಅವರ (ಭಾಮೈದ) ಮನೆ ಮೇಲೆ ಬೆಂಗಳೂರು, ಬೆಳಗಾವಿಯಲ್ಲಿ ದಾಳಿ ಮಾಡಿ 13 ಕೋಟಿ ರೂ ಅಧಿಕ ಮೌಲ್ಯದ ನಗದು, ಚಿನ್ನಾಭರಣ ವಶಪಡಿಸಿಕೊಂಡಿದ್ದರು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

(ಮಾಹಿತಿ ಅಪ್​ಡೇಟ್ ಆಗಲಿದೆ)

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.